DC Divakar MS

ಫೆ.26, 27ರಂದು ಬೆಂಗಳೂರಿನಲ್ಲಿ ಬೃಹತ್
ಉದ್ಯೋಗ ಮೇಳ: ಭಾಗವಹಿಸಲು ಅವಕಾಶ

ಕರುನಾಡ ಬೆಳಗು ಸುದ್ದಿ
ಹೊಸಪೇಟೆ (ವಿಜಯನಗರ) ಫೆ.20 –  ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಫೆಬ್ರವರಿ 26 ಮತ್ತು ಫ.27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ನಿರುದ್ಯೋಗ ಯುವಕ ಯುವತಿಯರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ತಿಳಿಸಿದ್ದಾರೆ
ಮುಖ್ಯಮಂತ್ರಿಗಳು, ಕರ್ನಾಟಕ ರಾಜ್ಯದ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸುವ ಸಲುವಾಗಿ ಬೃಹತ್ ಕೈಗಾರಿಕೆ, ಉನ್ನತ ಶಿಕ್ಷಣ, ಯುವಸಬಲೀಕರಣ, ಕೌಶಲ್ಯಾಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ ಹಾಗೂ ಇತ್ಯಾದಿ ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ, ಈ ಸಮಿತಿಯ ಮಾರ್ಗದರ್ಶನದಂತೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಸುಮಾರು 500 ಕಂಪನಿಗಳು ಭಾಗವಹಿಸಿ ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿವೆ. ಈ ಮೇಳದಲ್ಲಿ ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಿಂದ ಎಲ್ಲಾ ವಿದ್ಯಾರ್ಹತೆಯ ವಿದ್ಯಾರ್ಥಿಗಳು ಹಾಗೂ ಖಾಸಗಿ ವಲಯದ ಯಾವುದೇ ನಿಯೋಜಕರು (ಕಂಪನಿಗಳು) ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ಮತ್ತು ಕಂಪನಿಗಳು ವೆಬ್‌ಸೈಟ್ https://udyogamela.skillconnect.kaushalkar.com ನಲ್ಲಿ ಮುಂಚಿತವಾಗಿ ನೋಂದಣಿ ಮಾಡುವುದರ ಮೂಲಕ ಭಾಗವಹಿಸಬಹುದಾಗಿದೆ. ಅಲ್ಲದೆ ಕ್ಯೂ ಆರ್ ಕೋಡ್ ಮೂಲಕವೂ ನೋಂದಾಯಿಸಬಹುದಾಗಿದೆ.
              ವಿಜಯನಗರ ಜಿಲ್ಲೆಯ ಎಲ್ಲಾ ನಿರುದ್ಯೋಗಿ ಯುವಕ ಯುವತಿಯರು ವೆಬ್‌ಸೈಟ್‌ನಲ್ಲಿ ನೋಂದಾಯಿಸುವುದರ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ವಿಜಯನಗರ ಜಿಲ್ಲೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಅಥವಾ ಮೊ.ಸಂಖ್ಯೆ: 8073852104 & 9964502514 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!