
ನಗರ ಆರಾಧ್ಯ ದೇವತೆ ಕನಕದುರ್ಗಮ್ಮ ದೇವಸ್ಥಾನದ ಹುಂಡಿ ಎಣಿಕೆ,63.49 ರೂ.ಸಂಗ್ರಹ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, ೦೧- ನಗರದ ಶ್ರೀ ಕನಕ ದುರ್ಗಮ್ಮ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯಕ್ರಮ ನಡೆಸಲಾಯಿತು. ಕಳೆದ ವರ್ಷ ಅಕ್ಟೋಬರ್ ಇಂದ ಡಿಸೆಂಬರ್ ವರೆಗೆ ದೇವಸ್ಥಾನದಲ್ಲಿ ಅಳವಡಿಸಿದ್ದ ನಾಲ್ಕು ಹುಂಡಿಗಳ ಎಣಿಕೆ ಕಾರ್ಯಕ್ರಮ ನಡೆಯಿತು.
ಹುಂಡಿ ಎಣಿಕೆ ವೇಳೆ, ರೂ. 63, 49, 235 ಹಣ ಸಂಗ್ರಹವಾಗಿದೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯ ಆಯುಕ್ತರಾದ, ಹೆಚ್ ಗಂಗಾಧರ, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ದೇವಸ್ಥಾನದ ಪ್ರಧಾನ ಧರ್ಮ ಕರ್ತರಾದ ಪಿ ಎಮ್ ರಾಜಶೇಖರ್, ಪಾರ್ವತಿ ನಗರದ ಕೆ ಜಿ ಬಿ ಬ್ಯಾಂಕ್ ವ್ಯವಸ್ಥಾಪಕ ರಾಮಲಿಂಗಪ್ಪ ಹಾಗೂ ಗಾಂಧಿನಗರ ಪೊಲೀಸ್ ಠಾಣೆಯರಕ್ಷಕ ಪ್ರವೀಣ್ ಕುಮಾರ್ ಅವರ ನೇತೃತ್ವದಲ್ಲಿ ಕನಕದುರ್ಗಮ್ಮ ದೇವಸ್ಥಾನದ ಹುಂಡಿ ಹಣ ಎಣಿಕೆ ಮಾಡಲಾಯಿತು.