ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 10- ಬಿಜೆಪಿ ಪಕ್ಷದ ಎಸ್ ಸಿ ಮೊರ್ಚಾದ ಜಿಲ್ಲಾಧ್ಯಕ್ಷರಾದ ಸಿದ್ದೇಶ ಪೂಜಾರ ರವರು ಬಿಜೆಪಿ ಪಕ್ಷವನ್ನು ತೊರೆದು ಶಾಸಕರ ಕೆ. ರಾಘವೇಂದ್ರ ಹಿಟ್ನಾಳ ರವರು ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು ಹಾಗೂ ಹಿರಿಯರು ಆಗಿದ್ದ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ತಪ್ಪಿದ್ದು ಹಾಗೂ ಆತಂರಿಕ ಕಲಹದಿಂದ ಮತ್ತು ಬಿಜೆಪಿ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣಕ್ಕೆ ಬೇಸತ್ತು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಪತ್ರದ ಮೂಲಕ ಪ್ರಾಥಮಿಕ ಸದಸ್ಯತ್ವ ಮತ್ತು ಎಲ್ಲಾ ಹುದ್ದೆಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ ಎಂದು ಹೇಳಿದರು.
