ಇಂದು ಬಿಜೆಪಿ ವಿಜಯ ಸಂಕಲ್ಪ ಸಮಾವೇಶ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 16- ನಗರದ ಕೊಪ್ಪಳ ತಾಲೂಕು ಕ್ರೀಡಾಂಗಣ ಏಪ್ರಿಲ್ 17 ಬುಧುವಾರ ಮಧ್ಯಾಹ್ನ 1:30ಕ್ಕೆ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಸಮಾವೇಶ ಹಾಗೂ ಬಿಜೆಪಿ ಹಿರಿಯ ಮುಖಂಡ ಬಿ ಎಸ್ ಯಡಿಯೂರಪ್ಪ ನೇತ್ರತ್ವದಲ್ಲಿ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಜರುಗಲಿದೆ.
ಈ ಕುರಿತು ಪ್ರಕಟನೆ ನೀಡಿರುವ ಬಿಜೆಪಿ ವಿಜಯ ಸಂಕಲ್ಪ ಸಮಾವೇಶ ಸಭೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಮಾಜಿ ಸಚಿವರು ಶ್ರಿ ರಾಮುಲು,
ಮಾಜಿ ಸಚಿವರು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ, ಎನ್ ರವಿಕುಮಾರ್, ಬಳ್ಳಾರಿ ಸಂಸದರಾದ ದೇವೇಂದ್ರಪ್ಪ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಶಾಸಕ ಪಿ ರಾಜೀವ್ ಮತ್ತು ಲೋಕಸಭಾ ಕ್ಷೇತ್ರದ (ಎನ್. ಡಿ. ಎ) ಹಾಲಿ ಮತ್ತು ಮಾಜಿ ಶಾಸಕರು, ಸಂಸದರು ರಾಜ್ಯ ಪದಾಧಿಕಾರಿಗಳು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
