
ಬೆಳಕಿನ ಪರಿಣಾಮವನ್ನು ಕಂಡುಹಿಡಿದ ದಿನದ ಸ್ಮರಣೆಗಾಗಿ ವಿಜ್ಞಾನ ದಿನವನ್ನುಆಚರಿಸಲಾಗುತ್ತಿದೆ : ಶೇಖರಗೌಡ ರಾಮತ್ನಾಳ
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ,1- ಶಿಕ್ಷಕರ ಮಾರ್ಗದರ್ಶನಲ್ಲಿ ಶಾಲೆಗಳಲ್ಲಿ ತಯಾರಿಸುವ ವಿಜ್ಞಾನ ವಸ್ತು ಮಾದರಿಗಳಿಂದ ವಿನೋದದ ಮೂಲಕವೇ ವಿಜ್ಞಾನದ ಕಡೆಗೆ ಮಕ್ಕಳ ಜ್ಞಾನವು ವೃದ್ಧಿಸುತ್ತದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರು ಹಾಗೂ ಬನಶ್ರೀ ಹಿರಿಯ ಪ್ರಾಥಮೀಕ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಶೇಖರಗೌಡ ರಾಮತ್ನಾಳ ಹೇಳಿದರು.
ತಾಲೂಕಿನ ಹಿರೇ ಅರಳಿಹಳ್ಳಿ ಬನಶ್ರೀ ಹಿರಿಯ ಪ್ರಾಥಮೀಕ ಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಭಾರತದ ಮಹಾನ್ ವಿಜ್ಞಾನಿ ಸಿ.ವಿ.ರಾಮನ್ ಅವರು ಫೆಬ್ರುವರಿ 28 ರ 1928 ರಲ್ಲಿ .ಬೆಳಕಿನ ಪರಿಣಾಮ’ವನ್ನು ಕಂಡುಹಿಡಿದ ದಿನದ ಸ್ಮರಣೆಗಾಗಿ ಈ ದಿನವನ್ನು ವಿಜ್ಞಾನ ದಿನವಾಗಿ ಆಚರಿಸಲಾಗುತ್ತಿದೆ. ಬರಿಗಣ್ಣಿಗೆ ಕಾಣುವ ಬೆಳಕು ಬಿಳಿಯಾಗಿದ್ದರೂ ಅದರಲ್ಲಿ ಏಳು ಬಣ್ಣಗಳು ಇರುತ್ತವೆ ಎಂಬುದನ್ನು ಪ್ರಯೋಗದಿಂದ ತೋರಿಸಿದ್ದರು ಎಂದು ತಿಳಿಸಿದರು.
ಮಾನವ ಕುಲದ ಅಭಿವೃದ್ಧಿಗಾಗಿ ಹಾಗೂ ಶಾಂತಿಗಾಗಿ ಶ್ರಮಿಸುತ್ತಿರುವ ವಿಶ್ವದ ಎಲ್ಲಾ ವಿಜ್ಞಾನಿಗಳಿಗೆ ಈ ದಿನದಂದು ಅಭಿನಂದನೆ ತಿಳಿಸಬೇಕು. ವಿಜ್ಞಾನದ ಮೂಲಕ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿದೆ ಎಂದರು.
ವಸ್ತು ಪ್ರದರ್ಶನವನ್ನ ಪಾಲಕರು ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿಗಳು ವಿಜ್ಞಾನ ವಸ್ತುಗಳನ್ನ ವೀಕ್ಷಿಸಿ ಹರ್ಷವ್ಯಕ್ತ ಪಡಿಸಿದರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಥಮ ದ್ವಿತೀಯ ಬಹುಮಾನ ವಿತರಿಸಲಾಯಿತು ಮಕ್ಕಳಿಗೆ ಮತ್ತು ಜನರಿಗೆ ವಿಜ್ಞಾನದ ಮಹತ್ವದ ಕುರಿತು ಮಾಹಿತಿ ನೀಡಲಾಯಿತು ಕಾರ್ಯಕ್ರಮದಲ್ಲಿ ಶಿಕ್ಷಕರಾದ ಪ್ರಮೀಳಾ ರಂಜಾನಿಗೆ, ಪ್ರವೀಣ್ ಅವನ್ನವರ, ಮಾಂತೇಶ, ನಾಗರಾಜ,ಹೆಚ್ ಹೆಚ್.ಗಡಾದ,ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.