
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನ ವಿಶೇಷ ಕಾರ್ಯಕ್ರಮ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ,23 – ಹೆಣ್ಣು ಮಗುವನ್ನು ಸಂರಕ್ಷಿಸಿ, ಪೋಷಣೆ ದೊರೆಯುವಂತೆ ಮಾಡಿ ಸುಶಿಕ್ಷಿತ ರನ್ನಾಗಿ ಮಾಡುವುದೇ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಉದ್ದೇಶವಾಗಿದೆ ಎಂದು ರಾಷ್ಟ್ರೀಯ ಸಾಕ್ಷರತಾ ಮಿಷನ್ ಪ್ರಾಧಿಕಾರ ಸದಸ್ಯ ಸಮಾಜ ಸುಧಾರಕ ಅಬ್ದುಲ್ ನಬಿ ಅವರು ಅಭಿಪ್ರಾಯಪಟ್ಟರು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ನೆನಪಿಸಿ ಅವರು ಮಾತನಾಡುತ್ತಾ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನದ ವಿಶೇಷ ಮಕ್ಕಳ ಕಾರ್ಯಕ್ರಮ ಮನೆಯಲ್ಲಿ ಹೆಣ್ಣು ಹಾಗೂ ಗಂಡು ಮಕ್ಕಳನ್ನು ಸಮಾನವಾಗಿ ನೋಡುವ ಮನೋಭಾವ ಎಲ್ಲರಲ್ಲಿ ಮೂಡಬೇಕು ಇದಕ್ಕಾಗಿ ಹೆಣ್ಣು ಮಗುವಿಗೆ ಉನ್ನತ ಶಿಕ್ಷಣ ನೀಡುವ ಅವಶ್ಯಕತೆ ಇದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು .
ಸಿರುಗುಪ್ಪ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ವತಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ ಎಂಬುದು ಪ್ರತಿಯೊಬ್ಬ ತಂದೆ ತಾಯಿ ಮಗಳನ್ನು ಉಳಿಸಿ ಮಗಳನ್ನು ಓದಿಸಿ ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಹಿರಿಯ ಮೇಲ್ವಿಚಾರಕಿ ಹೇಮಾವತಿ ಅವರು ಹೇಳಿದರು ಬೇಟಿ ಬಚಾವೋ ಬೇಟಿ ಪಡಾವೋ ಸ್ಟಿಕರ್ಗಳನ್ನು ಸರ್ಕಾರಿ ಕಚೇರಿಗಳ ಗೋಡೆಗೆ ಅಂಟಿಸುವ ಕಾರ್ಯಕ್ರಮದಲ್ಲಿ ಅವರು ಇದರ ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಲಿಂಗ ಪಕ್ಷಪಾತ ಮತ್ತು ಲಿಂಗ ಆಯ್ಕೆ ಮಾಡುವುದು ತಡೆಗಟ್ಟುವುದು ಹೆಣ್ಣು ಮಕ್ಕಳ ಉಳಿವು ಮತ್ತು ಅವರ ರಕ್ಷಣೆಯನ್ನು ಖಾತ್ರಿ ಗೊಳಿಸುವುದು ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ಖಾತ್ರಿ ಗೊಳಿಸುವುದಾಗಿರುತ್ತದೆ ಹೆಣ್ಣು ಮಗುವನ್ನು ಶಾಲೆಗೆ ದಾಖಲಿಸುವುದು ಸಮಾನತೆಯನ್ನು ಪ್ರೋತ್ಸಾಹಿಸುವುದು ಲಿಂಗಾಪತ್ತೆ ಪರೀಕ್ಷೆ ಕಂಡು ಬಂದರೆ ತಕ್ಷಣವೇ ವರದಿ ಮಾಡುವುದು ವರದಕ್ಷಿಣೆ ಮತ್ತು ಬಾಲ್ಯ ವಿವಾಹ ವಿರೋಧಿಸುವುದು ಸರಳ ವಿವಾಹಕ್ಕೆ ಪ್ರೋತ್ಸಾಹಿಸುವುದು ನೆರೆಹೊರೆ ಮಹಿಳೆಯರ ಮತ್ತು ಹೆಣ್ಣು ಮಕ್ಕಳ ಸುರಕ್ಷತೆ ಕಾಪಾಡಲು ಶ್ರಮಿಸುವುದು ಅವರನ್ನು ಹಿಂಸೆ ಮುಕ್ತರನ್ನಾಗಿ ಮಾಡುವುದು ಹೆಣ್ಣು ಮಕ್ಕಳ ಸಾಧನೆಗಳನ್ನು ಪ್ರೋತ್ಸಾಹಿಸಿ ಬಾಲಕಿಯರ ಸ್ವಯಂ ರಕ್ಷಣೆಗೆ ಅಗತ್ಯ ಕೌಶಲ್ಯ ಒದಗಿಸುವುದು ಹೆಣ್ಣು ನಮಗೆ ಹೊರೆಯಲ್ಲ ಅವರು ಬೇರೆಯವರ ಸ್ವತ್ತಲ್ಲ ಎನ್ನುವ ಮನಸ್ಥಿತಿಯನ್ನು ಬೆಳೆಸುವುದಾಗಿದೆ ಎಂದರು.
ಮೇಲ್ವಿಚಾರಕಿಯರಾದ ನಾಗರತ್ನ ಗಂಗವ್ವ ಮೂಬಸರಗಿ ರೇಖಾ ರಾಣಿ ಎ ಎಂ ಮಹಾದೇವಿ ಇತರರು ಇದ್ದರು.