ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು ಗ್ಯಾರಂಟಿ ಯೋಜನೆಗಳನ್ನು ಎಲ್ಲರಿಗೂ ತಲುಪಿಸಲು ಸಾಧ್ಯವಾಗಿಲ್ಲ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,2- ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು ,ಅವರ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಎಲ್ಲರಿಗೂ ತಲುಪಿಸಲು ಸಾಧ್ಯವಾಗಿಲ್ಲ ಇದನ್ನು ಜನರಿಗೆ ನಾವು ತಿಳಿಸಬೇಕು ಎಂದು ಕಾರ್ಯಕಾರಿಣಿ ಉದ್ಘಾಟಿಸಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಲಲಿತಾ ಆನಾಪುರ ಹೇಳಿದರು .
ರಾಜ್ಯದಲ್ಲಿ ಅಭಿವೃದ್ಧಿ ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಹನ ಹಿಡಿ ಶಾಪ ಹಾಕುತ್ತಿದ್ದಾರೆ. ಜನವಿರೋದಿ ಕಾಂಗ್ರೆಸ್ ನಿಲವುಗಳನ್ನು ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತಲುಪಿಸಬೇಕು ರಂದರು.
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಜನಧನ್, ಉಜ್ವಲ್, ಆಯುಷ್ಮಾನ್ ಭಾರತ್, ಮುದ್ರಾ, ಬೇಟಿ ಬಜಾವೊ ಹೀಗೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಅವುಗಳನ್ನ ಜನರಿಗೆ ಮನವರುಕೆ ಮಾಡಿಕೊಡಬೇಕು ಎಮದು ತಿಳಿಸಿದರು.
ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆ ವೇಳೆ ಇವುಗಳನ್ನು ಜನರಿಗೆ ತಲುಪಿಸುವಲ್ಲಿ ನಾವು ವಿಫಲರಾಗಿ ಸೋತಿದ್ದೇವೆ. ಈ ತಪ್ಪು ಮುಂಬರುವ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಆಗದಂತೆ ಎಚ್ಚರ ವಹಿಸಯಚಮತೆ ಕರೆ ನೀಡಿದರು.
ಕುಷ್ಟಗಿ ಶಾಸಕ ಹಾಗೂ ವಿಧಾನಸಭೆ ಮುಖ್ಯ ಸಚೇತಕರೂ ಆಗಿರುವ ಶಾಸಕ ದೊಡ್ಡನಗೌಡ ಎಚ್.ಪಾಟೀಲ ಮಾತನಾಡಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಬೇಕು ಎಂಬುದು ನಮ್ಮೆಲ್ಲರ ಗುರಿಯಾಗಿದೆ ಭಾರತವನ್ನು ವಿಶ್ವಗುರು ಆಗಬೇಕು ಎನ್ನುವ ನಮ್ಮೆಲ್ಲರ ಗುರಿಯಾಗಿದ್ದು ಹಗಲಿರುಳು ಶ್ರಮಿಸಿ ಪಕ್ಷ ಗೆಲ್ಲಿ ಎಂದರು.
ಪ್ರಧಾನಿಗಳು ಪ್ರತಿ ಹಂತದಲ್ಲಿಯು ಮಾದರಿಯಾಗಿ ಕೆಲಸ ಮಾಡುತ್ತಾರೆ. ಚುನಾವಣಾ ಗಿಮಿಕ್ ಮಾಡದೇ ನಮ್ಮ ಕೇಂದ್ರ ಸರ್ಕಾರ ದೇಶದ ಆರ್ಥಿಕತೆಗೆ ತಕ್ಕಂತೆ ಬಜೆಟ್ ಮಂಡಿಸಿದೆ.
ಪಕ್ಷದ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್ ಮಾತನಾಡಿ ಬಿಜೆಪಿ ಪಕ್ಷಕ್ಕೆ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಬಳಿಕ ಪಕ್ಷದಲ್ಲಿ ಹೊಸ ಸಂಚಲನ ಮೂಡಿದೆ ರಾಜ್ಯದ ಲಕ್ಷಾಂತರ ಯುವಕರು ಬಿಜೆಪಿ ಸೇರುತ್ತಿದ್ದಾರೆ ಎಂದರು.
ದೇಶದಲ್ಲಿ ಕೇಂದ್ರ ಸರ್ಕಾರದ ಹಿಂದಿನ ಹತ್ತು ವರ್ಷಗಳಲ್ಲಿ ಪ್ರಧಾನಿಯವರ ಸಾಧನೆ ಮತ್ತು ಪಕ್ಷ ಸಂಘಟನೆ ಬಲಪಡಿಸುವ ಮೂಲಕ ಲೋಕಸಭಾ ಚುನಾವಣೆ ಎದುರಿಸಲಾಗುವುದು. 2047ರಲ್ಲಿ ವಿಕಸಿತ ಭಾರತದ ಸಂಕಲ್ಪಕ್ಕೆ ಮೋದಿ ಅವರಿಗೆ ಎಲ್ಲರೂ ಕೈ ಜೋಡಿಸಿ ಮನೆ ಮನೆಗೆ ತೆರಳಿ .ಮನ ಮನ ಗೆಲ್ಲುವ ಮೂಲಕ ಪಕ್ಷ ಕಟ್ಟೋಣ ಎಂದು ಕರೆ ನೀಡಿದರು.
ಲೋಕಸಭಾ ಚುನಾವಣೆ ಎದುರಿಸಲು ತಾಲೀಮು ಆರಂಭಿಸಿರುವ ಬಿಜೆಪಿ ಜಿಲ್ಲಾ ಘಟಕ ಪಕ್ಷ ಸಂಘಟನೆಯ ಮೂಲಕ ಜನರ ಮನೆ ತಲುಪುವುದು ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಜನರ ಮುಂದಿಟ್ಟು ಹೋರಾಡುವ ಎರಡು ಅಂಶಗಳನ್ನು ಕೈಗೆತ್ತಿಕೊಳ್ಳಲು ಮುಂದಾಗಬೇಕು ಎಂದು ನಿರ್ಧರಿಸಲಾಯಿತು.
ಪಕ್ಷದ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಮೇಶ ನಾಡಿಗೇರ, ನರಸಿಂಗರಾವ್ ಕುಲಕರ್ಣಿ, ಮಾಜಿ ಶಾಸಕ ಕೆ. ಶರಣಪ್ಪ, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ. ಬಸವರಾಜ, ಪ್ರಮುಖರಾದ ಮಂಜುಳಾ ಕರಡಿ, ಜಿ. ವೀರಪ್ಪ, ಶಿವಲೀಲಾ ದಳವಾಯಿ, ಉಮೇಶ ಸಜ್ಜನ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪೂಜಪ್ಪ, ಶೋಭಾ ನಗರ, ಮಹಾಲಕ್ಷ್ಮಿ ಕಂದಾರಿ, ಗಿರೇಗೌಡ್ರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
