2c136fae-be38-4577-97e1-318669006cc9

ಭಾರತೀಯ ಸಮವಸ್ತ್ರ ಸೇವೆಗಳಿಗೆ ಉಚಿತ ವೃತ್ತಿ ಮಾರ್ಗದರ್ಶನ : ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 18- ಭಾರತೀಯ ಸೇನೆ/ಇತರೆ ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ(ಬಾಲಕರಿಗೆ ಮಾತ್ರ) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25 ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ರೂ.2.50/- ಲಕ್ಷಗಳು ಹಾಗೂ ಪ್ರವರ್ಗ-2ಎ, 3ಎ, 3ಬಿ ಗಳಿಗೆ ರೂ.1.00/- ಲಕ್ಷ ಮೀರಿರಬಾರದು. ಅಭ್ಯರ್ಥಿಯು 10 ನೇ ತರಗತಿಯನ್ನು ಉತ್ತಿರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ ಶೇ.33 ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಮೇಲ್ಕಂಡAತೆ ಸಮಾನವಾದ ಗ್ರೇಡ್ ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು (10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ ಜುಲೈ 10 2024 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು.) ಅಭ್ಯರ್ಥಿಯು 10 ಜುಲೈ 2004 ರಿಂದ 10 ಜುಲೈ 2007 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.

ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಈ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ ವೆಬ್-ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಸಹಯವಾಣಿ ಸಂಖ್ಯೆಗಳಾದ ದಕ್ಷಿಣ ಕನ್ನಡ ಜಿಲ್ಲೆ: ದೂ.ಸಂ.0824-2225078, ಉಡುಪಿ ಜಿಲ್ಲೆ: ದೂ.ಸಂ:0820-2574881, ಉತ್ತರ ಕನ್ನಡ ಜಿಲ್ಲೆ:08382-226589 ಹಾಗೂ ಕೇಂದ್ರ ಕಛೇರಿ:8050770004 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!