6c80f111-10a5-4359-be48-02a98a86d2af (1)

ಭೂ ದಾಖಲೆಗಳ ಡಿಜಿಟಲೀಕರಣ 

ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾದರಿ ಅಭಿಲೇಖಾಲಯ ಉದ್ಘಾಟನೆ

ಕರುನಾಡ ಬೆಳಗು ಸುದ್ದಿ

ಹೊಸಪೇಟೆ (ವಿಜಯನಗರ) ಫೆ. 05: ಹೊಸಪೇಟೆ ತಾಲ್ಲೂಕು ಕಚೇರಿಯಲ್ಲಿ ನೂತನವಾಗಿ ಸ್ಥಾಪಿಸಲಾದ `ಮಾದರಿ ಅಭಿಲೇಖಾಲಯ’ವನ್ನು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ತಹಶೀಲ್ದಾರ್ ಕಚೇರಿಯಲ್ಲಿ ಉದ್ಘಾಟಿಸಿದರು.

ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಮಹತ್ತರ ಕಾರ್ಯಕ್ರಮವಾದ ಭೂ ಸುರಕ್ಷಾ, ಭೂ ದಾಖಲೆಗಳ ಇ-ಖಜಾನೆ ವ್ಯವಸ್ಥೆಯಿಂದ ತಾಲ್ಲೂಕು ಕಚೇರಿ, ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ ವ್ಯವಸ್ಥೆಯ ಮಾದರಿ ಅಭಿಲೇಖಾಲಯಕ್ಕೆ ಸೋಮವಾರ ಚಾಲನೆ ದೊರೆಯಿತು.
ಈ ಸಂದರ್ಭದಲ್ಲಿ ಶಾಸಕರಾದ ಹೆಚ್.ಆರ್.ಗವಿಯಪ್ಪ, ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಹೊಸಪೇಟೆ ತಹಶೀಲ್ದಾರರಾದ ವಿಶ್ವಜಿತ್ ಮೆಹ್ತಾ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಸೇರಿದಂತೆ ಮತ್ತಿತರರಿದ್ದರು.

ಮಾದರಿ ಅಭಿಲೇಖಾಲಯದ ವಿಶೇಷತೆ: ಹಳೆಯ ದುಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಶಾಶ್ವತ ಡಿಜಿಟಲ್ ದಾಖಲೆಗಳಾಗಿ ಪರಿವರ್ತನೆಯಾಗಲಿದೆ ರೆಕಾರ್ಡ್ ರೂಂಗಳಿಂದ ಪಡೆದುಕೊಳ್ಳಲು ಇರುವ ತೊಂದರೆಗಳ ನಿವಾರಣೆ. ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ಕಳುವಾಗಲು, ತಿದ್ದಲು ಅಸಾಧ್ಯ. ನೇರವಾಗಿ ನೀವೇ ಡಿಜಿಟಲ್ ಮಾಧ್ಯಮದಿಂದ ಭೂ ದಾಖಲೆಗಳನ್ನು ಪಡೆದುಕೊಳ್ಳುವ ಸೌಲಭ್ಯ. ನಿಮ್ಮ ದಾಖಲೆಗಳನ್ನು ನಿಮ್ಮ ಕೈಗೆ ತಲುಪಿಸುವ ಯೋಜನೆ. ವಿಳಂಬ, ಅಡೆ ತಡೆಗಳನ್ನು ಆಲಿಸಿ, ತ್ವರಿತ ಆಡಳಿತ ಸೇವೆಯನ್ನು ಒದಗಿಸುವ ಪ್ರಯತ್ನ. ಡಿಜಿಟಲ್ ಸ್ಪರ್ಶದಿಂದ ಉತ್ತಮ ಜನಪರ ಆಡಳಿತ, ನಿಮ್ಮ ಭೂ ಒಡೆನಕ್ಕೊಂದು ಗ್ಯಾರಂಟಿ. ಈ ಎಲ್ಲಾ ಸೌಲಭ್ಯಗಳು ಮಾದರಿ ಅಭಿಲೇಖಾಲಯದಿಂದ ಸಿಗಲಿವೆ.

Leave a Reply

Your email address will not be published. Required fields are marked *

error: Content is protected !!