
ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಮವಸ್ತ್ರ ಹಾಗೂ ಬಹುಮಾನ ವಿತರಣೆ
ಕರುನಾಡ ಬೆಳಗು ಸುದ್ದಿ
ಕುಕನೂರ, 03-ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ಮಂಡಲಗೇರಿ ಶಾಲೆಯ ಮಕ್ಕಳಿಗೆ ಸಮವಸ್ತ್ರ ಹಾಗೂ ಬಹುಮಾನ ವಿತರಣೆ ಮಾಡಲಾಯಿತು.
ತಾಲೂಕಿನ ಮಂಡಲಗೇರಿ ಗ್ರಾಮದಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗುರುವಾರ ದಸರಾ ರಜೆಯ ನಂತರದ ಶಾಲೆ ಪ್ರಾರಂಭದ ಎರಡನೇ ಅವಧಿಯ. ಎರಡನೆಯ ಬಾರಿ ಸಮವಸ್ತ್ರ ವಿತರಣೆ ಹಾಗೂ ರಜೆಯಲ್ಲಿ ಮಕ್ಕಳ ವಿದ್ಯಾಭ್ಯಾಸದ ಆಧಾರದ ಮೇಲೆ ಮಕ್ಕಳಿಗೆ ಬಹುಮಾನಗಳನ್ನು ಕೊಡುವ ಮುಖಾಂತರ ಮಕ್ಕಳ ಓದಿಗೆ ಪ್ರೋತ್ಸಾಹಿಸಲಾಯಿತು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಯ ಅಧ್ಯಕ್ಷರು, ಉಪಾಧ್ಯಕ್ಷರು,ಸರ್ವ ಸದಸ್ಯರುಗಳು, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಹ ಶಿಕ್ಷಕರು, ಗ್ರಾಮದ ಮಕ್ಕಳ ಪಾಲಕರು, ಯುವ ಮಿತ್ರರು, ಹಾಗೂ ಮುದ್ದು ಮಕ್ಕಳು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.