ಮತಗಟ್ಟೆಗಳಿಗೆ ಭೇಟಿ ನೀಡಿದ ಜಡ್ಪಿ ಉಪಕಾರ್ಯದರ್ಶಿ ಭೀಮಪ್ಪ ಲಾಳೇ
ಕರುನಾಡ ಬೆಳಗು ಸುದ್ದಿ
ವಿಜಯನಗರ, 11- ಹೊಸಪೇಟೆ ತಾಲೂಕಿನ ಚಿಲಕನಹಟ್ಟಿ ನಾಗಲಾಪುರ ಹಾಗೂಡನಾಯಕನಕೆರೆ ಗ್ರಾಮ ಪಂಚಾಯಿತಿಗಳಿಗೆ ಇಂದು ವಿಜಯನಗರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ ಭೇಟಿ ನೀಡಿ ಮತಗಟ್ಟೆ ಗಳನ್ನು ಪರಿಶೀಲನೆ ಮಾಡಿದರು.
ಮತಗಟ್ಟೆಗಳಲ್ಲಿ ಚುನಾವಣೆ ನಡೆಸಲು ಬೇಕಾದ ಮೂಲಭೂತ ಸೌಲಭ್ಯಗಳ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾರ್ಯದರ್ಶಿ ಬಿ ಎಫ್ ಟಿ ಗ್ರಾಮ ಪಂಚಾಯತಿ ಸಿಬ್ಬಂದಿ ಉಪಸ್ಥಿತರಿದ್ದರು.
ನರೇಗಾ ಕಾಮಗಾರಿ ಪರಿಶೀಲನೆ : ಹೊಸಪೇಟೆ ತಾಲೂಕಿನ ಚಿಲಕನಹಟ್ಟಿ ಗ್ರಾಮ ಪಂಚಾಯಿತಿಗೆ ಇಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳು ಭೀಮಪ್ಪ ಲಾಲಿ ಅವರು ಭೇಟಿ ನೀಡಿ ಇಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿ ಸ್ಥಳಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ನರೇಗಾ ಕೂಲಿ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಮೂಲಭೂತ ಸೌಕರ್ಯಗಳು ಹಾಗೂ ಎನ್ಎಂಎಂಎಸ್ ಹಾಜರಾತಿಯನ್ನು ಪರಿಶೀಲನೆ ಮಾಡಿದರು.
ಸ್ಮಶಾನ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲನೆ ಮಾಡಿ ನಂತರ ನರೇಗಾ ಯೋಜನೆ ಅಡಿಯಲ್ಲಿ ತಿಮ್ಮಲಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಕಾಂಪೌಂಡ್ ನಿರ್ಮಾಣ ಕಾಮಗಾರಿ ಯನ್ನು ಪರಿಶೀಲನೆ ಮಾಡಿದರು.
ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಭೀಮಪ್ಪ ಲಾ ಳಿ ಅವರು ಪ್ರತಿಯೊಬ್ಬರೂ ತಪ್ಪದೇ ಚುನಾವಣೆ ಮತದಾನದಲ್ಲಿ ಹಾಜರಾಗಿ ಮತದಾನ ಮಾಡಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಗಳ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಿಬ್ಬಂದಿ ಪಾಲ್ಗೊಂಡಿದ್ದರು.

