WhatsApp Image 2024-05-28 at 5.44.17 PM (1)

ಮತದಾನದ ಲೈವ್ ವೆಬ್‍ಕಾಸ್ಟಿಂಗ್ : ಬಿಜೆಪಿ ನಿಯೋಗ ಮನವಿ

ಕರುನಾಡ ಬೆಳಗು ಸುದ್ದಿ

ಬೆಂಗಳೂರು, 28- ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯು ಜೂನ್ 3ರಂದು ನಡೆಯಲಿದೆ. ಕನಕಪುರ, ಹೊಸಕೋಟೆ, ಆನೇಕಲ್, ದೇವನಹಳ್ಳಿ, ಬಿ.ಟಿಎಂ. ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನದ ಲೈವ್ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಮಾಡುವಂತೆ ಬಿಜೆಪಿ ನಿಯೋಗವು ಮನವಿ ಸಲ್ಲಿಸಿದೆ. ಇಂದು ಶೇμÁದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ಈ ಮನವಿ ಸಲ್ಲಿಸಲಾಯಿತು.

ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತಕುಮಾರ್, ಹಿರಿಯ ಮುಖಂಡರಾದ ದತ್ತಗುರು ಹೆಗ್ಡೆ, ಪ್ರಕೋಷ್ಠದ ಸದಸ್ಯ ಯಶವಂತ್, ವೀಣಾ ಅರುಣ್, ಕೆ.ಪಿ.ವಿಶ್ವನಾಥ, ಬೆಂಗಳೂರು ಉತ್ತರ ಜಿಲ್ಲಾ ಸಂಚಾಲಕ ಶಿವಾನಂದ ಅವರು ಈ ಮನವಿಗೆ ಸಹಿ ಹಾಕಿದ್ದಾರೆ.

ಮನವಿಯಲ್ಲಿ ತಿಳಿಸಿದ ವಿಧಾನಸಭಾ ಕ್ಷೇತ್ರಗಳು ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಒಳಗೊಂಡಿವೆ. ಮತದಾನ ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯುವ ದೃಷ್ಟಿಯಿಂದ ಮೇಲಿನ ಕ್ಷೇತ್ರಗಳಲ್ಲಿ ಮತದಾನದ ದಿನದಂದು ಲೈವ್ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಮಾಡುವಂತೆ ಕೋರಲಾಯಿತು.

Leave a Reply

Your email address will not be published. Required fields are marked *

error: Content is protected !!