
ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಹೊಣೆಗಾರಿಕೆ ಕುರಿತು ಜಾಗೃತಿ ಮೂಡಿಸಲು ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುವುದು
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ ,25- ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಹೊಣೆಗಾರಿಕೆ ಕುರಿತು ಜಾಗೃತಿ ಮೂಡಿಸಲು ಸಲುವಾಗಿ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿಜಯ ಕುಮಾರ ಕನ್ನೂರು ಹೇಳಿದರು.
ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರಿಯ ಮತದಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಸಿಗೆ ನೀರು ಹಾಕುವ. ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಪ್ರತಿ ಪ್ರಜೆಯೂ ತನ್ನನ್ನು ಆಳುವ ಪ್ರತಿನಿಧಿಯನ್ನು ಆಯ್ಕೆ ಮಾಡಲು ಇರುವ ವ್ಯವಸ್ಥೆಯೇ ಮತದಾನ.
ಮತದಾನ ದೇಶದ ಪ್ರಜೆಗಳ ಪ್ರಮುಖ ಹಕ್ಕು. ತಮ್ಮ ಒಳಿತನ್ನು ಬಯಸುವ ಜನಪರ ನಾಯಕನನ್ನು ತಾವೇ ಆಯ್ಕೆ ಮಾಡಿ ಕಳುಹಿಸಲು ಮತದಾನ ಎಂಬ ಪ್ರಕ್ರಿಯೆ ಬೇಕು. ದೇಶಕ್ಕೆ ಒಳಿತು ಮಾಡುವ ನಾಯಕನನ್ನು ಚುನಾಯಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ ಯುವಜನತೆ ಪ್ರತಿವರ್ಷ ನಡೆಯುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಮತದಾರರಾಗಿ ನೋಂದಣಿ ಮಾಡಿಕೊಳ್ಳಬೇಕು. ಪ್ರಜಾಪ್ರಭುತ್ವ ಬಲ ಗೊಳ್ಳಬೇಕಾದರೆ ಎಲ್ಲರ ಪಾಲ್ಗೊಳ್ಳುವಿಕೆ ಅಗತ್ಯ. ದೇಶ ಅಭಿವೃದ್ಧಿಯಾಗಬೇಕಾದರೆ ನಾವು ನಮ್ಮ ಆಯ್ಕೆಯನ್ನು ಅಮೂಲ್ಯ ಮತದಾನದ ಮೂಲಕ ವ್ಯಕ್ತಪಡಿಸಬೇಕು ಎಂದು ಹೇಳಿದರು.
ಮುಂದಿನ ದಿನಮಾನಗಳಲ್ಲಿ ಲೋಕಸಭಾ ಚುನಾವಣೆ ಇರುವುದರಿಂದ ಈ ಬಾರಿಯ ಮತದಾರರ ದಿನ ವಿಶೇಷವಾಗಿರಲಿದೆ. ದಿನಾಚರಣೆ ಅರ್ಥಪೂರ್ಣವಾಗಿ, ಯುವ ಮತದಾರರಲ್ಲಿ ಮತದಾನದ ಬಗೆಗೆ ಹುಮ್ಮಸ್ಸು ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾಗುತ್ತದೆ. ‘ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತ ವಾಗಿ ಮತದಾನ ಮಾಡುವೆ’ಎಂಬ ಘೋಷವಾಕ್ಯದೊಂದಿಗೆ ಪ್ರಮಾಣ ಮಾಡಬೇಕಾಗಿದೆ ಎಂದು ಸಿವಿಲ್ ನ್ಯಾಯಧೀಶರಾದ ಆಯಿಷಾಬಿ ಪಿ ಮುಜೀದ್ ಹೇಳಿದರು.
ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಯ ಘನತೆಯನ್ನು ಎತ್ತಿಹಿಡಿಯುತ್ತೇವೆ. ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ’ ಎಂದು ಪ್ರತಿಜ್ಞಾ ವಿಧಿ ಬೋಧಿಸಲಾಯಿತು ಹೊಸದಾಗಿ ಮತದಾರರ ಗುರುತಿನ ಚೀಟಿಯನ್ನು ಯುವ ಜನರಿಗೆ ವಿತರಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಬಸವರಾಜ ತೆನ್ನಳ್ಳಿ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ತಾ.ಪಂ ಇ. ಓ. ಸಂತೋಷ ಬೀರದಾರ ಪಾಟೀಲ್, ಗ್ರೇಡ್ -2 ತಹಶೀಲ್ದಾರ್ ನಾಗಪ್ಪ ಸಜ್ಜನ್, ತಾಲೂಕ ವಕೀಲರ ಸಂಘದ ಅಧ್ಯಕ್ಷ ಪ್ರಕಾಶ ಬೇಲೇರಿ, ಅಪರ ಸರ್ಕಾರಿ ವಕೀಲ ಮಲ್ಲನಗೌಡ ಪೋಲೀಸ್ ಪಾಟೀಲ್, ಕ್ಷೇತ್ರ ಶಿಕ್ಷಣಾಧಿಕಾರಿ ನಿಂಗಪ್ಪ.ಕೆ.ಟಿ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ನಾಗೇಶ, ಸರಕಾರಿ ಪ್ರಥಮ ದರ್ಜೆ ಕಾಲೇಜ್ ಪ್ರಾಚಾರ್ಯರಾದ ಕೆ.ಹೆಚ್.ಛತ್ರದ ಸೇರಿದಂತೆ ಮತ್ತು ಇತರರು ಭಾಗವಹಿಸಿದ್ದರು