
ಮಳೆಗಾಲದ ಸಾಂಕ್ರಾಮಿಕ ರೋಗ ತಡೆಗಟ್ಟುವ ತಾಲೂಕ ಟಾಸ್ಕ್ ಫೋರ್ಸ್ ಸಭೆ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 28- ತಾಲೂಕು ತಹಶೀಲ್ದಾರ್ ರವರ ಕಚೇರಿಯಲ್ಲಿ ಪ್ರವಾಹ ಮತ್ತು ಮಳೆಗಾಲಗಳಲ್ಲಿ ಹರಡುವ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಕುರಿತು ತಾಲೂಕು ಟಾಸ್ಕ್ ಫೋರ್ಸ್ ಸಭೆಯನ್ನು ಉಪತಹಶೀಲ್ದಾರ್ ರಾಘವೇಂದ್ರ ರವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.
ತಾಲೂಕು ಆರೋಗ್ಯ ಅಧಿಕಾರಿ ಡಾ. ಬಿ . ಈರಣ್ಣ ರವರು ಮಳೆಗಾಲದ ಆರಂಭ ಹಾಗೂ ಪ್ರವಾಹ ಸಂಭವಿಸುವ ಸಂದರ್ಭದಲ್ಲಿ ವಾಂತಿಭೇದಿ ಅತಿಸಾರ ಭೇದಿ , ಕರಳುಬೇನೆ ಕಾಲರ, ಕಾಮಲೆ, ವಿಷಮ ಶೀತ ಜ್ವರ, ಮಲೇರಿಯಾ ಡೆಂಗ್ಯೂ , ಚಿಕುನ್ ಗುನ್ಯಾ, ಮೆದುಳು ಜ್ವರ, ಕ್ಷಯ ಮುಂತಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮುಂಜಾಗ್ರತಾ ಮತ್ತು ರಕ್ಷಣಾ ಕ್ರಮಗಳನ್ನು ಕೈಗೊಂಡಲ್ಲಿ ರೋಗಮುಕ್ತ ಸಮಾಜದ ನಿರ್ಮಾಣ ಸಾಧ್ಯ. ಆದ್ದರಿಂದ ಎಲ್ಲಾ ಇಲಾಖೆಗಳ ಪಾತ್ರ ಕುರಿತಂತೆ ,ಸಹಭಾಗಿತ್ವ ಸಹಕಾರ ಅಗತ್ಯವಿದ್ದು ಎಲ್ಲಾ ಇಲಾಖೆಯವರು ಸಹಕರಿಸಲು ಕೋರಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೊಹಮ್ಮದ್ ಖಾಸಿಂ ರವರು ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆ, ಶಿಶು ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ, ಸಾರಿಗೆ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗಳು ಕೈಗೊಳ್ಳಬೇಕಾದ ಕಾರ್ಯ ಕ್ರಮಗಳನ್ನು , ರಕ್ಷಣಾತ್ಮಕ ಕ್ರಮಗಳನ್ನು ಕುರಿತಂತೆ ವಿವರವಾಗಿ ಮಾಹಿತಿ ನೀಡಿದರು
ನಂತರದಲ್ಲಿ ಎಲ್ಲಾ ಇಲಾಖಾಧಿಕಾರಿಗಳಿಗೆ ಇಲಾಖಾವಾರು ಅನುಸರಿಸಬೇಕಾದ ಕ್ರಮಗಳ ಕುರಿತಾದ ಪತ್ರಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಉಪ ತಹಸೀಲ್ದಾರರು ರಾಘವೇಂದ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರದೀಪ್ ತಾಲೂಕು ಪಂಚಾಯಿತಿ ಸಹಾಯಕ ಅಧಿಕಾರಿಗಳು ಸುಜಾತ ಕೋರಿ ಪೌರಾಯುಕ್ತರು ನಗರಸಭೆ, ಗುರುಪ್ರಸಾದ್ ಮುಖ್ಯ ಅಧಿಕಾರಿಗಳು ಪಟ್ಟಣ ಪಂಚಾಯಿತಿ ತೆಕ್ಕಲಕೋಟೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹೆಚ್. ಗುರ್ರಪ್ಪ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎ ಗಾದಿಲಿಂಗಪ್ಪ ಸಮಾಜ ಕಲ್ಯಾಣ ಅಧಿಕಾರಿ ಬಿ ರಾಜೇಶ್ವರಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಸದಸ್ಯರು ಸಮಾಜ ಸೇವಕರು ಅಬ್ದುಲ್ ನಬಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷ ಹೆಚ್ ಲಿಂಗರಾಜ ರೆಡ್ಡಿ ಮುಖ್ಯ ವೈದ್ಯಾಧಿಕಾರಿಗಳು ಸಾರ್ವಜನಿಕ ಆಸ್ಪತ್ರೆ, ತಾಲೂಕಿನ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ತಾಲೂಕು ಹಿರಿಯ ನಿರೀಕ್ಷಣಾಧಿಕಾರಿ ಉಪಸ್ಥಿತರಿದ್ದರು