2c136fae-be38-4577-97e1-318669006cc9

ಮಹನೀಯರ ಜಯಂತಿಗೆ ಕಡ್ಡಾಯ ಹಾಜರಾಗಲು ಸೂಚನೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 9- ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಅವಧಿಯಲ್ಲಿ 2024-25ನೇ ಸಾಲಿನ ಮಹಾಪುರುಷರಮಹನೀಯರ ಜಯಂತಿಗಳನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಣೆ ಮಾಡಲು ತಿಳಿಸಿರುತ್ತಾರೆ.

ಆದ್ದರಿಂದ 2024-25ನೇ ಸಾಲಿನ ಶ್ರೀ ಬಸವ ಜಯಂತಿಯನ್ನು ಹಾಗೂ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಮೇ 10 ರಂದು, ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಮೇ 12 ರಂದು ಮತ್ತು ಶ್ರೀ ಭಗೀರಥ ಜಯಂತಿಯನ್ನು ಮೇ 14 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುತ್ತಿದ್ದು, ಈ ಕಾರ್ಯಕ್ರಮಗಳಿಗೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು ಹಾಗೂ ತಮ್ಮ ಅಧೀನ ಕಾರ್ಯಾಲಯಗಳಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಜಯಂತಿಗಳನ್ನು ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!