
ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಯ 1ನೇ ತರಗತಿಗೆ ಪ್ರವೇಶ ಆರಂಭ
ಕರುನಾಡ ಬೆಳಗು ಸುದ್ದಿ
ವಿಜಯನಗರ, 1- 2024-25ನೇ ಸಾಲಿನ ವಿಜಯನಗರ ಜಿಲ್ಲೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ವ್ಯಾಪ್ತಿಗೆ ಬರುವ ಹೂವಿನಹಡಗಲಿ ತಾಲೂಕಿನ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆ ನಂದಿನಹಳ್ಳಿ ಈ ಆಶ್ರಮ ವಸತಿ ಶಾಲೆಗೆ 1ನೇ ತರಗತಿಗೆ ಖಾಲಿ ಇರುವ 25 ಸೀಟುಗಳಿಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಜೂನ್ 10 ಕೊನೆಯ ದಿನವಾಗಿದೆ. ಅರ್ಜಿಗಳನ್ನು ವಿಜಯನಗರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅಥವಾ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಹೂವಿನಹಡಗಲಿ ತಾಲೂಕು ಕಚೇರಿಗೆ ಅಥವಾ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆ ನಂದಿನಹಳ್ಳಿ ಈ ವಸತಿ ಶಾಲೆ ಕಚೇರಿಯಲ್ಲಿ ಸಲ್ಲಿಸಬಹುದು.
ಈ ವಸತಿ ಶಾಲೆಗೆ 1ನೇ ತರಗತಿಗೆ ತರಗತಿಗೆ ಖಾಲಿ ಇರುವ 25 ಸೀಟುಗಳಿಗೆ ಶೇ.19ರಷ್ಟು ಎಸ್.ಟಿ ಮತ್ತು ಶೇ.6ರಷ್ಟು ಇತರೆ ಜಾತಿ ವಿದ್ಯಾರ್ಥಿಗಳಿಗೆ ಮೀಸಲಾತಿಯನ್ನು ಒದಗಿಸಲಾಗಿರುತ್ತದೆ. ಇಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗೆ 6 ವರ್ಷ ಕಡ್ಡಾಯವಾಗಿ ತುಂಬಿರಬೇಕು., ಪೋಷಕರ ಮತ್ತು ವಿದ್ಯಾರ್ಥಿಗಳ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿಗಳು ಮತ್ತು ವಾಸಸ್ಥಳ ಪ್ರಮಾಣ ಪತ್ರದ ಪ್ರತಿಗÀಳೊಂದಿಗೆ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ವಿಜಯನಗರ ಜಿಲ್ಲಾ ವ್ಯಾಪ್ತಿಗೆ ಸೇರಿರಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಹಡಗಲಿ ಮೊ:9901980762 ಅಥವಾ ನಿಲಯಪಾಲಕರು, ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆ ನಂದಿನಹಳ್ಳಿ, ಹೂವಿನಹಡಗಲಿ ತಾಲೂಕು ಮೊ: 9901865009 ಇವರಿಗೆ ಸಂಪರ್ಕಿಸಬಹುದಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.