
ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಬಲರಾಗಿ ಮುನ್ನಡೆಯಿರಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಕರೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,23- ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಸಮಾನತೆ ಇದ್ದು, ಸರ್ಕಾರದ ವಿವಿಧ ಯೋಜನೆಗಳು ಜಾರಿಯಾಗುತ್ತಿವೆ. ಅವುಗಳನ್ನು ಬಳಸಿಕೊಂಡು ಸಬಲರಾಗಿ ಮುನ್ನಡೆಯಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಎನ್ಆರ್ಎಲ್ಎಂ ಯೋಜನೆಯಡಿ ಎಸ್ಎಚ್ಜಿ ಮಹಿಳೆಯರಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಘನ ಮತ್ತು ದ್ರವ ತ್ಯಾಜ್ಯ ಘಟಕಗಳ ನಾಲ್ಕು ಚಕ್ರದ ವಾಹನ ಚಾಲನಾ ತರಬೇತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯತ್ ಮಟ್ಟದಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಾಹನಕ್ಕೆ ವಾಹನ ಚಾಲಕಿಯರನ್ನಾಗಿ ಸ್ವ-ಸಹಾಯ ಗುಂಪಿನ ಮಹಿಳೆಯರನ್ನು ಆಯ್ಕೆ ಮಾಡಲಾಗಿದ್ದು, ಮಹಿಳೆಯರು ಧೈರ್ಯದಿಂದ ವಾಹನ ಚಲಾವಣೆ ಮಾಡುವಲ್ಲಿ ಆಸಕ್ತಿ ವಹಿಸಿ ಕಲಿಯಬೇಕು. ಉತ್ತಮ ತರಬೇತಿ ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಮೋದ್.ಪಿ., ಅವರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ಮಹಿಳೆಯರ ಪಾತ್ರ ಬಹು ಮುಖ್ಯವಾಗಿದೆ. ಉತ್ತಮ ತರಬೇತಿ ಪಡೆದುಕೊಳ್ಳಬೇಕು. ಬಳ್ಳಾರಿ ಜಿಲ್ಲೆಯಲ್ಲಿ ಚಾಲನಾ ತರಬೇತಿ ಪಡೆಯದೆ ಇರುವ ಮಹಿಳೆಯರಿಗೆ ತರಬೇತಿ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಏಜಿಎಂ ಹಾಗೂ ಡಿ.ವಿ.ಪಿ.ಆರ್ ಮುರಳೀಕೃಷ್ಣ, ಖಾಗ್ರಾ ಉಪ ನಿರ್ದೇಶಕ ಸಾದಿಕ್ ಉಲ್ಲಾ, ತಾಪಂ ಇಒ ಮಡಿಗಿನ ಬಸಪ್ಪ, ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಹಿರಿಯ ವ್ಯವಸ್ಥಾಪಕ ಶರಣಬಸವ ರೆಡ್ಡಿ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರಾಜೇಸಾಬ್ ಎರಿಮನಿ,