WhatsApp Image 2024-03-10 at 5.00.38 PM

ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಿ : ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್

ಕರುನಾಡ ಬೆಳಗು ಸುದ್ದಿ

ಬಳ್ಳಾರಿ,10- ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಕರ್ತವ್ಯದಲ್ಲಿ ನಿಯೋಜನೆಗೊಳ್ಳುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಚುನಾವಣೆ ಘೋಷಣೆಯಾಗುವ ದಿನದಿಂದಲೇ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಗಾ ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹಾಗೂ ಚುನಾವಣಾ ವೆಚ್ಚ ಹಾಗೂ ಇತರೆ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚುನಾವಣೆ ಘೋಷಣೆಯಾದ ನಂತರ 24, 48 ಹಾಗೂ 72 ಗಂಟೆಗಳಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮೂರು ವಿವಿಧ ಭಾಗಗಳಲ್ಲಿ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಎಆರ್‍ಓ, ಎಇಆರ್‍ಓ, ಬಿಎಲ್‍ಓಗಳಿಗೆ ತಿಳಿಸಿದರು.

ಮೊದಲ ಹಂತದಲ್ಲಿ 24 ಗಂಟೆಯೊಳಗೆ ಸರ್ಕಾರದ ಜಾಹೀರಾತುಗಳು, ಎರಡನೇ ಹಂತದಲ್ಲಿ 48 ಗಂಟೆಯೊಳಗೆ ಸರ್ಕಾರಿ ಸ್ವಾಮ್ಯದ ನಿಗಮ ಮಂಡಳಿಗಳು ಹಾಗೂ ಮೂರನೇ ಹಂತದಲ್ಲಿ 72 ಗಂಟೆಯೊಳಗೆ ಖಾಸಗಿ ವಲಯದಲ್ಲಿ ನೀತಿ ಸಂಹಿತೆಗೆ ವಿರುದ್ದವಾದ ಜಾಹೀರಾತುಗಳನ್ನು ತೆಗೆಯಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಗ್ರಾಪಂ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಸೂಚಿಸಿದರು.

ಚುನಾವಣೆ ಘೋಷಣೆಯಾದ ತಕ್ಷಣ ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳ ಬ್ಯಾನರ್, ಫ್ಲೆಕ್ಸ್, ಉದ್ಘಾಟನೆಗೊಂಡ ಕಾಮಗಾರಿಗಳ ಫಲಕಗಳು, ಗ್ರಾಮ – ನಗರಗಳ ಸ್ವಾಗತ ಕಮಾನುಗಳು ಹಾಗೂ ಕೊಡುಗೆ ನೀಡಿದ ವಸ್ತುಗಳ ಮೇಲೆ ರಾಜಕೀಯ ವ್ಯಕ್ತಿಗಳ ಹಾಗೂ ಜನಪ್ರತಿನಿಧಿಗಳ ಭಾವಚಿತ್ರ ತೆರವುಗೊಳಿಸುವಂತೆ ಕ್ರಮ ವಹಿಸಬೇಕು ಎಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾದರೆ, ಎಂಸಿಸಿ ತಂಡಗಳು ಉಲ್ಲಂಘನೆ ಆಗದಂತೆ ಎಚ್ಚರ ವಹಿಸಬೇಕು. ಸಹಾಯಕ ವೆಚ್ಚ ವೀಕ್ಷಕರು, ಫ್ಲೈಯಿಂಗ್ ಸ್ಕ್ವಾಡ್‍ಗಳು, ವೀಡಿಯೋ ಸರ್ವೆಲನ್ಸ್, ವೀಡಿಯೋ ವಿವ್ಹಿಂಗ್ ತಂಡಗಳು, ಸ್ಟ್ಯಾಟಿಕ್ ಸರ್ವೆಲನ್ಸ್ ತಂಡಗಳು ಜಾಗೃತರಾಗಿ ಕಾರ್ಯನಿರ್ವಹಿಸಬೇಕು ಎಂದರು.
ಈಗಾಗಲೇ ಗಡಿಜಿಲ್ಲೆ ಭಾಗದಲ್ಲಿ ಚೆಕ್ ಪೆÇೀಸ್ಟ್‍ಗಳು ಕಾರ್ಯಪ್ರವೃತ್ತವಾಗಿವೆ. ಎಫ್‍ಎಸ್, ಎಸ್‍ಎಸ್‍ಟಿ, ವಿಎಸ್‍ಟಿ, ವಿವಿಟಿ ತಂಡ ಹಾಗೂ ಪೆÇಲೀಸ್ ಸೆಕ್ಟರ್‍ಗಳಿಗೆ ನಿಯೋಜನೆಗೊಳ್ಳುವ ಅಧಿಕಾರಿಗಳು ಚುನಾವಣಾ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ಆಯೋಗದ ನಿರ್ದೇಶನಗಳನ್ನು ತಿಳಿದುಕೊಂಡು ತಮ್ಮ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ಪಾಲಿಸಬೇಕು ಎಂದರು.

ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ತಮ್ಮ ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕಿದೆ. ಚುನಾವಣೆ ಕರ್ತವ್ಯವನ್ನು ನಿಷ್ಪಕ್ಷ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ನಿಯೋಜನೆಗೊಂಡ ಎಲ್ಲ ತಂಡಗಳೂ ಹೆಚ್ಚು ಗಮನ ವಹಿಸಬೇಕು ಎಂದು ತಿಳಿಸಿದರು.

ಸಹಾಯಕ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ತಂಡಗಳ ಅಧಿಕಾರಿಗಳಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡಬೇಕು. ಮಸ್ಟರಿಂಗ್, ಡಿ- ಮಸ್ಟರಿಂಗ್ ಕೇಂದ್ರ, ಎಣಿಕೆ ಕೇಂದ್ರ, ಪೆÇೀಸ್ಟಲ್ ಬ್ಯಾಲೆಟ್, ಇ-ಎಸ್‍ಎಂಎಸ್, ಸಿ-ವಿಜಿಲ್, ಸುವಿಧಾ ಸೇರಿದಂತೆ ಅಗತ್ಯ ತರಬೇತಿ ಹೊಂದಬೇಕು ಎಂದರು.

ಜಿಲ್ಲೆಯಲ್ಲಿ ಗುರುತಿಸಲಾಗಿರುವ ಮತಗಟ್ಟೆಗಳಲ್ಲಿ ಕುಡಿಯುವ ನೀರು, ಬೆಳಕಿನ ವ್ಯವಸ್ಥೆ, ಶೌಚಾಲಯ, ಮತಗಟ್ಟೆಗಳ ದುರಸ್ಥಿ ಸಂಬಂಧಿದಂತೆ ಪರಿಶೀಲನೆ ನಡೆಸಬೇಕು. ಹೊಸ ಮತಗಟ್ಟೆ ಕೇಂದ್ರಗಳ ಅವಶ್ಯಕತೆ ಇದ್ದಲ್ಲಿ ಮಾಹಿತಿ ನೀಡಬೇಕು. ಸಂಬಂಧಿಸಿದ ಅಧಿಕಾರಿಗಳು ಮತಗಟ್ಟೆ ಕೇಂದ್ರಗಳಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಅವರು ತಿಳಿಸಿದರು.

ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಹಾಗೂ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಚುನಾವಣೆ ಕರ್ತವ್ಯಗಳನ್ನು ತಂಡವಾಗಿ ಹೊಣೆಗಾರಿಕೆಯಿಂದ ಕೆಲಸ ನಿರ್ವಹಿಸಿದರೆ ಯಶಸ್ವಿಯಾಗಲು ಸಾಧ್ಯವಾಗಲಿದೆ. ಹಾಗಾಗಿ ಪ್ರತಿಯೊಬ್ಬರೂ ನಿಯೋಜಿಸಿದ ಕರ್ತವ್ಯವನ್ನು ಯಾವುದೇ ಲೋಪ ಇಲ್ಲದೆ ನಿರ್ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಮಾತನಾಡಿ, ಸೂಕ್ಷ್ಮ ಮತಗಟ್ಟೆ ಕೇಂದ್ರಗಳ ಬಗ್ಗೆ ನಿಗಾವಹಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು. ಸಮಸ್ಯೆ ಕಂಡುಬಂದಲ್ಲಿ ಪೆÇಲೀಸ್ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಸಹಾಯಕ ಆಯುಕ್ತರಾದ ಹೇಮಂತ್, ಚುನಾವಣಾ ತರಬೇತುದಾರ ರುದ್ರೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಹಾಗೂ ತಾಪಂ ಇಓ ಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!