IMG-20240121-WA0026

 

 

ಮಿಲೇನಿಯಂ ಶಾಲೆಯಲ್ಲಿ 9 ನೇ ವಾರ್ಷಿಕ ಕ್ರೀಡಾಕೂಟ   ಮಕ್ಕಳಿಗೆ ಪಾಠದ ಜೋತೆಗೆ ಕ್ರೀಡೆ ಮುಖ್ಯ 

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 21- ಶಾಲೆಯು ಉತ್ತಮವಾದ ಕ್ರೀಡಾಂಗಣವನ್ನು ಒಳಗೊಂಡಿರಬೇಕು. ಮಿಲೇನಿಯಂ ಶಾಲೆಯು ಅತ್ಯುತ್ತಮವಾದ ಕ್ರೀಡಾಂಗಣವನ್ನು ಒಳಗೊಂಡಿದ್ದು ಮಕ್ಕಳಿಗೆ ಇಂತಹ ದೈಹಿಕ ಕ್ರೀಡಾ ಚಟುವಟಿಕೆಗಳನ್ನು ಏರ್ಪಡಿಸುವುದರಿಂದ ಮಕ್ಕಳನ್ನು ದೈಹಿಕ ಸದೃಢರನ್ನಾಗಿ ಮಾಡಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧ ಎಸ್ ವಂಟಗೋಡಿ ಹೇಳಿದರು.

ಅವರು ಮಿಲೇನಿಯಂ ಪಬ್ಲಿಕ್ ಶಾಲೆಯಲ್ಲಿ 9 ನೇ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಪಾಲಕ ಪೋಷಕರಿಗೆ ಮಕ್ಕಳನ್ನು ಇಂದಿನ ಸ್ಪರ್ಧಾ ಜಗತ್ತಿನಲ್ಲಿ ಹೇಗೆ ಬೆಳೆಸಬೇಕು ಎಂಬುದನ್ನು ತಿಳಿಸಿಕೊಟ್ಟರು. ಹಾಗೆಯೇ
ಶಾಲೆಯಲ್ಲಿ ಇಂತಹ ಕ್ರೀಡಾಕೂಟ ಏರ್ಪಡಿಸಿ ಮಕ್ಕಳಿಗೆ ಮಾತ್ರವಲ್ಲದೆ ಪೋಷಕರಿಗೂ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಅವರಲ್ಲಿಯೂ ಸಹ ಕ್ರೀಡಾ ಮನೋಭಾವವನ್ನು ಬೆಳೆಸುವ ಅದ್ಭುತ ಪ್ರಯತ್ನ ಮಾಡಿದ್ದಾರೆ ,ಇಂತಹ ಕಾರ್ಯಕ್ರಮಗಳು ಮಕ್ಕಳನ್ನು ದೈಹಿಕವಾಗಿ ಸದೃಢರನ್ನಾಗಿ ಮಾಡುತ್ತದೆ ಎಂದು ತಿಳಿಸಿದರು.

ಇನ್ನೋರ್ವ ಗೌರವಾನ್ವಿತ ಅತಿಥಿಗಳಾಗಿ ಆಗಮಿಸಿದ ಪ್ರಭಾರಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳಾದ ಬಸವರಾಜ್. ಎ. ಕಾರ್ಯಕ್ರಮವನ್ನು ಉದ್ದೇಶಿಸಿ
ಮಕ್ಕಳಿಗೆ, ಹಾಗೂ ಪೋಷಕರಿಗೆ ಕ್ರೀಡೆಗಳ ಮಹತ್ವವನ್ನು ತಿಳಿಸಿದರು.

ಮಿಲೇನಿಯಂ ಶಾಲೆಯ ಅಧ್ಯಕ್ಷ ಗಿರೀಶ್ ಕಣವಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲಕರು ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿರುವುದು ನನಗೆ ಅತೀವ ಸಂತೋಷವನ್ನುಂಟು ಮಾಡಿದೆನಿಮ್ಮ ಪ್ರೋತ್ಸಾಹ ಸದಾ ಹೀಗೆ ಇರಲಿ ಎಂದು ತಿಳಿಸಿದರು. ಶಾಲೆಯ ಎಲ್ಲಾ ಶಿಕ್ಷಕ ಸಿಬ್ಬಂದಿಯವರು ಪಾಲಕ ಪೋಷಕರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ , ಪೋಷಕರಲ್ಲಿ ಸ್ಪರ್ಧಾ ಮನೋಭಾವವನ್ನು ಹೆಚ್ಚಿಸಿದರು.

ಈ ಕಾರ್ಯಕ್ರಮದಲ್ಲಿ ಮಿಲೇನಿಯಮ್ ಪಬ್ಲಿಕ್ ಶಾಲೆಯ ಕಾರ್ಯದರ್ಶಿಗಳಾದ ಶ್ರೀಮತಿ ಗೀತಾ ಕಣಿವಿ, ಪ್ರಾಂಶುಪಾಲರಾದ ಶ್ರೀಮತಿ ಸಪ್ನಾ ತೋಟದ ಹಾಗೂ ಎಲ್ಲಾ ಪಾಲಕ ಪೋಷಕರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!