2c136fae-be38-4577-97e1-318669006cc9

ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 12- 2024-25ನೇ ಸಾಲಿನ ಕೃಷಿ ಪ್ರಶಸ್ತಿಯಡಿ ಮುಂಗಾರು ಹಂಗಾಮಿನ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಬೆಳೆ ಸ್ಪರ್ಧೆಗೆ ಆಸಕ್ತ ರೈತ ಹಾಗೂ ರೈತ ಮಹಿಳೆಯರಿಂದ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಪ್ರಶಸ್ತಿ ಹಾಗೂ ಕೃಷಿ ಪಂಡಿತ ಪ್ರಶಸ್ತಿ ಕಾರ್ಯಕ್ರಮಗಳನ್ನು ಆನ್‌ಲೈನ್ ಮೂಲಕ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ಆಸಕ್ತ ರೈತರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ ನಲ್ಲಿ ಕೃಷಿ ಪ್ರಶಸ್ತಿಯಡಿ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

ರಾಜ್ಯ ಮಟ್ಟದ ಸ್ಫರ್ಧೆಗೆ ಆಯ್ಕೆ ಮಾಡಿದ ಬೆಳೆಗಳು: ರಾಜ್ಯ ಮಟ್ಟದಲ್ಲಿ ಸ್ಫರ್ಧೆಗಾಗಿ ಜಿಲ್ಲೆಯ ನೀರಾವರಿ ಮತ್ತು ಮಳೆಯಾಶ್ರಿತ ಮುಂಗಾರು ಭತ್ತ ಹಾಗೂ ಮಳೆಯಾಶ್ರಿತ ಮುಂಗಾರು ಬೆಳೆಗಳಾದ ಶೇಂಗಾ, ನವಣೆ, ಸಜ್ಜೆ, ತೊಗರಿ ಪೂರ್ಣಬೆಳೆ ಮತ್ತು ಮುಸುಕಿನ ಜೋಳ ಬೆಳೆಗಳಿಗೆ ರೈತರು ಅರ್ಜಿ ಸಲ್ಲಿಸಬಹುದಾಗಿದೆ.

ಕೃಷಿ ಪ್ರಶಸ್ತಿಯಡಿ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಅರ್ಜಿಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು, ಆಸಕ್ತ ರೈತರು ಸಿಟಿಜನ್ ಲಾಗಿನ್ ಅಥವಾ ಆರ್‌ಎಸ್‌ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ಸೇವಾ ಕೇಂದ್ರಗಳಲ್ಲಿ ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಕೆ-ಕಿಸಾನ್ ಪೋರ್ಟಲ್ ಮುಖಾಂತರ ಅಗತ್ಯ ಮಾಹಿತಿಗಳೊಂದಿಗೆ ತಮ್ಮ ಎಫ್‌ಐಡಿ ( ಫ್ರೂಟ್ ಐಡಿ) ಅನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಆನ್‌ಲೈನ್ ಅರ್ಜಿ ಸಲ್ಲಿಸಲು ಸಂಬAಧಿಸಿದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!