Basavaraj rayareddi

ಬಸವರಾಜ ರಾಯರೆಡ್ಡಿ ಅವರ ಮುಂದುವರೆದ ಪ್ರವಾಸ ಕಾರ್ಯಕ್ರಮ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 18- ಜೂನ್ 15 ರಿಂದ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸದಲ್ಲಿರುವ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಮುಂದುವರೆಸಿದ್ದಾರೆ.

ಜೂನ್ 19 ರಂದು ಮಧ್ಯಾಹ್ನ 12 ಗಂಟೆಗೆ ಯಲಬುರ್ಗಾದ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮಾಡುವರು. ಮಧ್ಯಾಹ್ನ 03 ಗಂಟೆಗೆ ಯಲಬುರ್ಗಾ/ಕುಕನೂರು ತಾಲ್ಲೂಕು ಅಧಿಕಾರಿಗಳ ಸಭೆ ನಡೆಸುವರು. ಸಂಜೆ 06 ಗಂಟೆಗೆ ಯಲಬುರ್ಗಾದಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ಹೊಸಪೇಟೆಗೆ ತೆರಳಿ ವಾಸ್ತವ್ಯ ಮಾಡುವರು.

ಜೂನ್ 20 ರಂದು ಬೆಳಿಗ್ಗೆ 10 ಗಂಟೆಯಿAದ 11.30 ಗಂಟೆಯವರೆಗೆ ಯಲಬುರ್ಗಾ ತಾಲ್ಲೂಕಿನ ಗ್ರಾಮಗಳಲ್ಲಿ ಕಟ್ಟಡಗಳ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸುವರು. ಜೂನ್ 21 ರಂದು ಯಲಬುರ್ಗಾ ತಾಲ್ಲೂಕಿನ ಗ್ರಾಮಗಳಲ್ಲಿ ಕಟ್ಟಡಗಳ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿ ಸಂಜೆ 05 ಗಂಟೆಗೆ ಯಲಬುರ್ಗಾದಿಂದ ನಿರ್ಗಮಿಸಿ, ರಸ್ತೆ ಮಾರ್ಗವಾಗಿ ಧಾರವಾಡಕ್ಕೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!