WhatsApp Image 2024-03-12 at 4.56.37 PM

ಮೋದಿಯಿಂದ ಒಂದು ನಿಲ್ದಾಣ, ಒಂದು ಉತ್ಪನ್ನ ಮಳಿಗೆಗೆ ವರ್ಚುಯಲ್ ಚಾಲನೆ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ,12-ಪ್ರಧಾನಿಮಂತ್ರಿಗಳಾದ ನರೇಂದ್ರ ಮೋದಿ ಅವರು ಇಂದು, ಬಳ್ಳಾರಿ ರೈಲ್ವೇ ನಿಲ್ದಾಣದಲ್ಲಿನ ನೂತನ ಒಂದು ನಿಲ್ದಾಣ, ಒಂದು ಉತ್ಪನ್ನ ಮಳಿಗೆಗೆ ವಿಡಿಯೋ ವರ್ಚುಯಲ್ ಮೂಲಕ ಚಾಲನೆ ನೀಡಿದರು.

 

ಸ್ಥಳೀಯ ಮಾರುಕಟ್ಟೆಯ ಉತ್ಪನ್ನಗಳಿಗೆ ಉತ್ತೇಜನ ನೀಡಲು ಬಳ್ಳಾರಿಯ ರೈಲ್ವೆ ನಿಲ್ದಾಣದಲ್ಲಿನ ‘ಒಂದು ನಿಲ್ದಾಣ, ಒಂದು ಉತ್ಪನ್ನ’ ಸ್ಟಾಲ್, ಟ್ರಾಲಿಗಳ ಲೋಕಾರ್ಪಣೆಗೊಳಿಸಿದರು.

 

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೈಲ್ವೇ ಇಲಾಖೆಯ ಸುಮಾರು 85 ಸಾವಿರ ಕೋಟಿ ರೂ. ಅಧಿಕ ಮೊತ್ತದ ವಿವಿಧ ರೈಲ್ವೆ ಯೋಜನೆಗಳ ಶಂಕುಸ್ಥಾಪನೆ, ಲೋಕಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ 10 ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಯೋಜನೆಗಳಿಗೆ ಚಾಲನೆ ನೀಡಿದರು.

 

ಬಳ್ಳಾರಿಯ ರೈಲ್ವೆ ನಿಲ್ದಾಣದಲ್ಲಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಬಿ.ಶ್ವೇತ ಅವರು ಭಾಗವಹಿಸಿದ್ದರು.

ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ರೈಲ್ವೆ ಸಚಿವಾಲಯವು ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡುವ ದೃಷ್ಟಿಕೋನವನ್ನು ಹೊಂದಿದೆ. ಉತ್ಪನ್ನಗಳ ಮಾರಾಟ ಮಾಡಲು ಮಳಿಗೆ ಒದಗಿಸುವ ನಿಟ್ಟಿನಲ್ಲಿ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಮಳಿಗೆಯನ್ನು ಬಳ್ಳಾರಿ ನಿಲ್ದಾಣದಲ್ಲಿ ನೂತನವಾಗಿ ಆರಂಭಿಸಲಾಗಿದ್ದು, ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.

ಹುಬ್ಬಳ್ಳಿ ವಲಯ ರೈಲ್ವೇ ಬಳಕೆದಾರರ ಸಲಹಾ ಸಮಿತಿಯ ಸದಸ್ಯ ರವಿ ಕುಮಾರ್ ಮಾತನಾಡಿ, ಸ್ಥಳೀಯ ಮಾರುಕಟ್ಟೆಯ ಉತ್ಪನ್ನಗಳಿಗೆ ಉತ್ತೇಜನ ನೀಡುವ ಯೋಜನೆ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಆಗಿದ್ದು, ಸ್ಥಳೀಯ ಕುಶಲ ಕರ್ಮಿಗಳಿಗೆ ಉಪಯುಕ್ತವಾಗಲಿದೆ ಎಂದರು.

ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ‘ಒಂದು ನಿಲ್ದಾಣ, ಒಂದು ಉತ್ಪನ್ನ’ ಯೋಜನೆಯಡಿ ಸಂಡೂರು ಕರ ಕುಶಲ ಕೇಂದ್ರದ ಲಂಬಾಣಿ ಕಸೂತಿ ಕಲೆಯ ಉತ್ಪನ್ನಗಳ ಮಾರಾಟ ಮಳಿಗೆ ಆರಂಭಿಸಲಾಯಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪ ಮೇಯರ್ ಬಿ.ಜಾನಕಿ, ಹಿರಿಯ ವಿಭಾಗೀಯ ಮೆಕ್ಯಾನಿಕಲ್ ಇಂಜಿನಿಯರ್ ಆಂಜನೇಯಲು, ವಿಭಾಗೀಯ ವೈದ್ಯಕೀಯ ಅಧಿಕಾರಿ ಸುಶ್ಮಿತಾ ಜಗನ್ ಮೋಹನ್ ರೆಡ್ಡಿ, ಚೇಂಬರ್ ಆಫ್ ಕಾಮರ್ಸ್‍ನ ಅಧ್ಯಕ್ಷರಾದ ಮಹಾರುದ್ರ ಗೌಡ, ಚೇಂಬರ್ ಆಫ್ ಕಾಮರ್ಸ್‍ನ ಸದಸ್ಯ ರಾಮಚಂದ್ರಯ್ಯ, ಬಳ್ಳಾರಿ ರೈಲ್ವೆ ನಿಲ್ದಾಣದ ವ್ಯವಸ್ಥಾಪಕ ನಾಗೇಶ್ ಬಾಬು ಶರ್ಮಾ, ಮುಖ್ಯ ವಾಣಿಜ್ಯ ನಿರೀಕ್ಷಕ ಎಸ್. ಹೊನ್ನೂರಸ್ವಾಮಿ ಸೇರಿದಂತೆ, ಮಹಾನಗರ ಪಾಲಿಕೆಯ ಸದಸ್ಯರು, ರೈಲ್ವೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಒಂದು ನಿಲ್ದಾಣ, ಒಂದು ಉತ್ಪನ್ನ ಮಳಿಗೆ ಉದ್ಘಾಟನೆ ಮಾಡಿದ ಸಂಸದ ವೈ.ದೇವೇಂದ್ರಪ್ಪ

ಬಳ್ಳಾರಿ ರೈಲ್ವೇ ನಿಲ್ದಾಣದಲ್ಲಿ ‘ಒಂದು ನಿಲ್ದಾಣ, ಒಂದು ಉತ್ಪನ್ನ’ ಯೋಜನೆಯಡಿಯ ಸಂಡೂರು ಕರಕುಶಲ ಕೇಂದ್ರದ ಲಂಬಾಣಿ ಕಸೂತಿ ಕಲೆಯ ಉತ್ಪನ್ನಗಳ ಮಾರಾಟ ನೂತನ ಮಳಿಗೆಯನ್ನು ಸಂಸದ ವೈ.ದೇವೇಂದ್ರಪ್ಪ ಅವರು ಮಂಗಳವಾರ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಬಿ.ಶ್ವೇತಾ, ಉಪ ಮೇಯರ್ ಬಿ.ಜಾನಕಿ, ಹಿರಿಯ ವಿಭಾಗೀಯ ಮೆಕ್ಯಾನಿಕಲ್ ಇಂಜಿನಿಯರ್ ಆಂಜನೇಯಲು, ವಿಭಾಗೀಯ ವೈದ್ಯಕೀಯ ಅಧಿಕಾರಿ ಸುಶ್ಮಿತಾ ಜಗನ್ ಮೋಹನ್ ರೆಡ್ಡಿ, ಚೇಂಬರ್ ಆಫ್ ಕಾಮರ್ಸ್‍ನ ಅಧ್ಯಕ್ಷರಾದ ಮಹಾರುದ್ರ ಗೌಡ, ಚೇಂಬರ್ ಆಫ್ ಕಾಮರ್ಸ್‍ನ ಸದಸ್ಯ ರಾಮಚಂದ್ರಯ್ಯ, ಬಳ್ಳಾರಿ ರೈಲ್ವೆ ನಿಲ್ದಾಣದ ವ್ಯವಸ್ಥಾಪಕ ನಾಗೇಶ್ ಬಾಬು ಶರ್ಮಾ, ಮುಖ್ಯ ವಾಣಿಜ್ಯ ನಿರೀಕ್ಷಕ ಎಸ್. ಹೊನ್ನೂರಸ್ವಾಮಿ ಸೇರಿದಂತೆ, ಮಹಾನಗರ ಪಾಲಿಕೆಯ ಸದಸ್ಯರು, ರೈಲ್ವೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!