
ಕನ್ನಡ ಭಾಷೆಗೆ ಎರಡು ಸಾವಿರ ವರ್ಷದ ಇತಿಹಾಸವಿದೆ
ತಹಶೀಲ್ದಾರ್ ಬಸವರಾಜ ತೆನ್ನಳ್ಳಿ
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ , 1 – ಕನ್ನಡ ಭಾಷೆಗೆ 2 ಸಾವಿರ ವರ್ಷಗಳ ಇತಿಹಾಸ ವಿದೆ. ನಾಡಿನ ನೆಲ. ಜಲ. ಗಡಿ ಭಾಷೆ ಹಾಗೂ ಸಂಸ್ಕೃತಿಯನ್ನು ಪ್ರತಿಯೊಬ್ಬರು ಗೌರವಿಸಬೇಕು. ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ಎಲ್ಲರೂ ನಾಡ ಹಬ್ಬದಂತೆ ಆಚರಿಸಬೇಕು ಎಂದು ತಹಶೀಲ್ದಾರ್ ಬಸವರಾಜ ತೆನ್ನಳ್ಳಿ ಹೇಳಿದರು
ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಬಯಲು ರಂಗ ಮಂದಿರದ ಆವರಣದಲ್ಲಿ ತಾಲೂಕು ಆಡಳಿತ. ತಾಲೂಕು ಪಂಚಾಯತ್.ಪಟ್ಟಣ ಪಂಚಾಯಿತ.ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 68ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮತ್ತು ಕಾಯ೯ಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಎಲ್ಲಾದರೂ ಇರು ಎಂತಾದರೂ ಇರು ನೀ ಕನ್ನಡನಾಗಿರು ಕನ್ನಡವೇ ಸತ್ಯ ಕನ್ನಡವೇ ನಿತ್ಯ. ಕನ್ನಡದ ಕನಸು.ಮನಸ್ಸು ಕನ್ನಡಿಗನೆಂಬ ಹೆಮ್ಮೆಯ ಸೂಗಸು ಎಲ್ಲಾ ಕಡೇ ಕನ್ನಡ ಭಾಷೆ ಉಳಿಸು.ಮತ್ತು ಬೆಳಿಸು. ಪ್ರತಿಯೊಬ್ಬರು ಕನ್ನಡ ಭಾಷೆ ಪ್ರೀತಿಸಿ. ಗೌರವಿಸಿ.ಕರ್ನಾಟಕ ರಾಜ್ಯೋತ್ಸವ ನಾಡ ಹಬ್ಬದಂತೆ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಕರ್ನಾಟಕ ರಾಜ್ಯ ಸಂಸ್ಥಾಪನ ದಿನವನ್ನು ಪ್ರತಿ ವರ್ಷ ನವಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತದೆ 1956ರ ನವಂಬರ್ 1ರಂದು ದಕ್ಷಿಣ ಭಾರತದ ಕನ್ನಡ ಮಾತನಾಡುವ ಪ್ರದೇಶಗಳ ವಿಲೀನದ ಮೂಲಕ ಕರ್ನಾಟಕ ರಾಜ್ಯೋತ್ಸವವನ್ನು ಸ್ಥಾಪಿಸಲಾಯಿತು.
ಕನ್ನಡದ ಕೆಂಪು ಬಣ್ಣ ಅಭಿವೃದ್ಧಿಯ ಸಂಕೇತವಾಗಿದೆ ಮತ್ತು ಹಳದಿ ಬಣ್ಣ ಶಾಂತಿಯ ಸಂಕೇತವಾಗಿದೆ. ಕನ್ನಡ ಭಾಷೆ, ನೆಲ, ಜಲ, ಕನ್ನಡ ಸಂಸ್ಕೃತಿ ಎಲ್ಲವನ್ನು ಗೌರವದಿಂದ ಕಾಣುವ ಕೆಲಸ ಮಾಡಬೇಕು ಅಂದಾಗಲೇ ಕನ್ನಡದ ಕೀರ್ತಿ ಹೆಚ್ಚು ಬೆಳಸಬೇಕು ಎಂದು ಹೇಳಿದರು. ಕನ್ನಡ ಭಾಷೆಗೆ ಸಿಗಬೇಕಾದ ಸೌಲಭ್ಯಗಳು ಇನ್ನು ಹೆಚ್ಚು ಸೌಲಭ್ಯ ಸಿಗುತ್ತಿಲ್ಲ ಅದಕ್ಕೆ ಇನ್ನು ಮುಂದಾದರೂ ಕನ್ನಡ ಭಾಷೆಗೆ ಹೆಚ್ಚಿನ ಸೌಲಭ್ಯ ಸಿಗುವಂತಾಗಬೇಕು,ಸಮಸ್ತ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದರು.
ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ.ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ,ತ್ಯಾಗ,ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ.
1973 ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ.ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯಲ್ಲಿ ಆಡು ಭಾಷೆಯಾಗಲಿ, ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹೇಳಿದರು ಈ ವೇಳೆ ಹಲವಾರು ರಂಗದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ. ತಹಶೀಲ್ದಾರ್ ಬಸವರಾಜ ತೆನ್ನಳ್ಳಿ ತಾಪಂ ಸಂತೋಷ ಪಾಟೀಲ. ಗ್ರೇಡ್ 2ತಹಶೀಲ್ದಾರ ನಾಗಪ್ಪ ಸಜ್ಜನ್. ಪಪಂ ಮುಖ್ಯಾಧಿಕಾರಿ ನಾಗೇಶ್. ಸಿಪಿಐ ಮೌನೇಶ್ವರ ಮಾಲಿ ಪಾಟೀಲ.ಸಿಡಿಪಿಓ ಬೆಟದಪ್ಪ ಮಾಳೇಕೋಪ. ರಮೇಶ್ ಚಿಣಗಿ.ಅಕ್ಷರ ದಾಸೋಹ ಅಧಿಕಾರಿ ಎಫ್. ಎಂ. ಕಳ್ಳಿ.ಮುಖಂಡರಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಕೆರಿಬಸಪ್ಪ ನಿಡಗುಂದಿ. ವೀರಣ್ಣ ಹುಬ್ಬಳ್ಳಿ.ಡಾಕ್ಟರ ಶಿವನಗೌಡ ದಾನರಡ್ಡಿ. ಅಮರೇಶ ಹುಬ್ಬಳ್ಳಿ.
ಕಳಕಪ್ಪ ತಳವಾರ. ಅಶೋಕ ಅರಕೇರಿ ರಿಯಾಜ್ ಖಾಜ್ಜಿ ಹನುಮಂತ ಬಜಂತ್ರಿ.ಪಪಂ ಸವ೯ ಸದಸ್ಯರು ಮತ್ತು ಶಿಕ್ಷಕರು ಶಿಕ್ಷಕಿಯರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.