2c136fae-be38-4577-97e1-318669006cc9

ಯಲಬುರ್ಗಾ ಪ.ಪಂ : ಆಕ್ಷೇಪಣೆ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ,12- ಯಲಬುರ್ಗಾ ಪಟ್ಟಣ ಪಂಚಾಯತ ವ್ಯಾಪ್ತಿಯ, ಸ್ಥಳೀಯ ಯೋಜನಾ ಪ್ರಾಧಿಕಾರದ ವತಿಯಿಂದ ಪಟ್ಟಣದ ಸ್ಥಳಿಯ ಯೋಜನಾ ಪ್ರದೇಶಕ್ಕೆ ಮಹಾಯೋಜನೆ ರೂಪಿಸುವ ಸಂಬಂಧವಾಗಿ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಯಲಬುರ್ಗಾ ಸ್ಥಳೀಯ ಯೋಜನಾ  ಪ್ರಾಧಿಕಾರವು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಅಧಿನಿಯಮ 1961 ರ ಕಲಂ (5) ಮತ್ತು (10) ರನ್ವಯ ಕ್ರಮ ಜರುಗಿಸಿ, ಯಲಬುರ್ಗಾ ಪಟ್ಟಣದ ಸ್ಥಳೀಯ ಯೋಜನಾ ಪ್ರದೇಶಕ್ಕೆ ಮಹಾಯೋಜನಾ (ತಾತ್ಕಾಲಿಕ) ಅನ್ನು ರೂಪಿಸಿ ನಕ್ಷೆ ಮತ್ತು ವರದಿಗಳೊಂದಿಗೆ ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗಿತ್ತು.  ಸರ್ಕಾರದ ಆದೇಶ ಸಂಖ್ಯೆ. ನಅಇ 215 ಗುಅಪ್ರಾ 2020 ಬೆಂಗಳೂರು ದಿನಾಂಕ 28-03-2023 ರಂತೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಅಧಿನಿಯಮ 1961 ರ ಕಲಂ 13(1) ರನ್ವಯ ತಾತ್ಕಾಲಿಕ ಅನುಮೋದನೆಯನ್ನು ನೀಡಲಾಗಿದೆ. ಅದರಂತೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 13(2) ರಂತೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಅಹ್ವಾನಿಸಿದೆ.
ನಕ್ಷೆ ಮತ್ತು ವರದಿಯನ್ನು ಪಟ್ಟಣ ಪಂಚಾಯತ ಕಛೇರಿಯಲ್ಲಿ ಸಾರ್ವಜನಿಕರ ವೀಕ್ಷಣೆಗಾಗಿ ಇಡಲಾಗಿದ್ದು, ಸಾರ್ವಜನಿಕರು ತಮ್ಮ ಆಕ್ಷೇಪಣೆಗಳು ಅಥವಾ ಸಲಹೆ, ಸೂಚನೆಗಳು ಇದ್ದಲ್ಲಿ ಈ ಅಧಿಸೂಚನೆ ಪ್ರಕಟಣೆಗೊಂಡ ದಿನಾಂಕದಿಂದ 60 ದಿನದೊಳಗಾಗಿ ಖುದ್ದಾಗಿ ಅಥವಾ ನೋಂದಣಿ ಅಂಚೆಯ ಮೂಲಕ ಮುಖ್ಯಾಧಿಕಾರಿಗಳು, ಪಟ್ಟಣ ಪಂಚಾಯತ್ ಕಾರ್ಯಲಯ ಯಲಬುರ್ಗಾ ಇವರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬೇಕು. 60 ದಿನಗಳ ನಂತರ ಯಾವುದೇ ಆಕ್ಷೇಪಣೆಗಳು, ಸಲಹೆ, ಸೂಚನೆಗಳು ಬಂದಲ್ಲಿ ಅವುಗಳನ್ನು ಸ್ವೀಕರಿಸಲಾಗುವುದಿಲ್ಲವೆಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!