
ರಾಜ್ಯ ಮಟ್ಟದ ಕರ್ನಾಟಕ ಮಾಧ್ಯಮ ರತ್ನ ಪ್ರಶಸ್ತಿ ಪ್ರಧಾನ
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ,25- 2024 ನೇ ಸಾಲಿನ ರಾಜ್ಯ ಮಟ್ಟದ ಕರ್ನಾಟಕ ಮಾಧ್ಯಮ ಸೇವಾ ರತ್ನ ಪ್ರಶಸ್ತಿಯನ್ನು ಅಖಿಲವಾಣಿ ಕನ್ನಡ ದಿನ ಪತ್ರಿಕೆ ಹಾಗೂ ವಿವಿಸಿ ಸುದ್ದಿ ವಾಹಿನಿಯ ವರದಿಗಾರ ಹಾಗೂ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ತಾಲೂಕ ಅಧ್ಯಕ್ಷ ಶ್ರೀಕಾಂತಗೌಡ ಮಾಲಿ ಪಾಟೀಲ್ ರವರಿಗೆ ನೀಡಿ ಗೌರವಿಸಲಾಯಿತು.
ಮುದ್ರಣ ಮಾದ್ಯಮ ಮತ್ತು ದೃಶ್ಯ ಮಾದ್ಯಮದಲ್ಲಿ ಕಳೆದ 12 ವರ್ಷಗಳಿಂದ ಯಲಬುರ್ಗಾ ಗ್ರಾಮೀಣ ಭಾಗದ ಜನರ ಹಲವಾರು ಸಮಸ್ಯೆಗಳನ್ನು ತಮ್ಮ ಲೇಖನಗಳ ಮೂಲಕ ಸರಕಾರದ ಗಮನ ಸೆಳೆದು ನ್ಯಾಯ ಕೊಡಿಸುವಲ್ಲಿ ಪ್ರಾಮಾಣಿಕ ಮತ್ತು ನಿಸ್ವಾರ್ಥ ಸೇವೆಯನ್ನು ಸಲ್ಲಿಸಿದ್ದಾರೆ.
ಇವರ ಈ ಸಮಾಜ ಸೇವೆಯನ್ನು ಪರಿಗಣಿಸಿದ ‘ರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಬೆಂಗಳೂರಿನ ನೆಲಮಂಗಲದಲ್ಲಿರುವ ಎಮ್.ವ್ಹಿ.ಎಮ್ ಕನ್ವೆನ್ಷನ್ ಸಭಾಂಗಣದಲ್ಲಿ ಆಯೋಜಿಸಲಾಗಿರುವ 2ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಡಾ.ಬಸವಾನಂದ ಶ್ರೀಗಳು, ಕರವೇ ರಾಜ್ಯ ಅಧ್ಯಕ್ಷ ಪ್ರವೀಣ ಕುಮಾರ ಶೆಟ್ಟಿ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ, ಬಾನು ಪ್ರಕಾಶ , ಡಿ.ಸಿದ್ದರಾಜು, ಜಗಳೂರು ಲಕ್ಷ್ಮಣರಾವ್, ಡಾ.ರಾಮಚಂದ್ರ, ಮಂಜುಳಾ ಬಂಗ್ಲೆ, ರಾಜ್ಯ ಸಂಘದ ಖಜಾಂಚಿ ಉಮೇಶಗೌಡ್ರ, ಎಸ್ಎ.ಸ್ ಪಾಟೀಲ್, ಬಸವರಾಜ ಶಿರಸಂಗಿ, ಡಾ.ಬಿ.ವಾಸುದೇವ, ಶರಣ ಬಸವ ಸೇರಿದಂತೆ ಮತ್ತು ಇತರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದ್ದಾರೆ.
ಯಲಬುಗಾ೯ ಕನಾ೯ಟಕ ಕಾರ್ಯ ನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷ ಶ್ರೀಕಾಂತಗೌಡ್ರ ಮಾಲಿ ಪಾಟೀಲ ನೀಲಪ್ಪ ವಿ ಖಾನಾವಳಿ ಶರಣಬಸಪ್ಪ ದಾನಕೈ ಮುತ್ತಪ್ಪ ಆದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಮತ್ತು ಸವ೯ ಪದಾಧಿಕಾರಿಗಳು ಹಾಗೂ ಸವ೯ ಸದಸ್ಯರು ರಾಜ್ಯಾಧ್ಯಕ್ಷರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.