WhatsApp Image 2024-05-17 at 4.01.45 PM

ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 17- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸಿರುಗುಪ್ಪ ತಾಲೂಕ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹೆಚ್ ಲಿಂಗರಾಜ ರೆಡ್ಡಿ ಅವರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ತಂದೆ ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು ಮತ್ತು ಸರ್ಕಾರಿ ನೌಕರರ ಸಂಘದ ಸದಸ್ಯರಾಗಿರಬೇಕು ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷ ಹೆಚ್ ಲಿಂಗರಾಜ ರೆಡ್ಡಿ ಅವರಿಂದ ದೃಢೀಕರಿಸಿ ಆನ್ ಲೈನ್ ನಲ್ಲಿ ಅಪ್ಲೋಡ್ ಮಾಡಬೇಕು ನಿಗಮ ಮಂಡಳಿ ಪ್ರಾಧಿಕಾರ ವಿಶ್ವವಿದ್ಯಾಲಯ ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ ನೌಕರರು ಅರ್ಜಿ ಸಲ್ಲಿಸುವಂತಿಲ್ಲ ಹೆಚ್ಚಿನ ಮಾಹಿತಿಗಾಗಿ ತಾಲೂಕ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಎಚ್ ಲಿಂಗರಾಜ ರೆಡ್ಡಿ ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!