
ಲೋಕಸಭಾ ಚುನಾವಣೆಯಲ್ಲಿ ಎಡಗೈ ಸಮುದಾಯಕ್ಕೆ ಟಿಕೆಟ್ ಮಿಸ್
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,28- ಲೋಕಸಭಾ ಚುನಾವಣೆಯಲ್ಲಿ ಎಡಗೈ ಸಮುದಾಯಕ್ಕೆ ಎರಡು ಟಿಕೆಟ್ ನೀಡುವ ಪದ್ಧತಿಯನ್ನು ಕಾಂಗ್ರೆಸ್ ಪಾಲಿಸಿಕೊಂಡು ಬಂದಿತ್ತು. ಕಲಬುರ್ಗಿ, ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಬಲಗೈ ಸಮುದಾಯಕ್ಕೆ ನೀಡಿದರೆ, ಚಿತ್ರದುರ್ಗ, ಕೋಲಾರ ಕ್ಷೇತ್ರವನ್ನು ಎಡಗೈ ಸಮುದಾಯಕ್ಕೆ ನೀಡುವ ಪರಿಪಾಠ ಇತ್ತು. ಬಿಜಾಪುರ ಕ್ಷೇತ್ರ ಭೋವಿ ಅಥವಾ ಲಂಬಾಣಿ ಸಮುದಾಯದರವರಿಗೆ ನೀಡುತ್ತಿದ್ದರು ಆದರೆ ಈ ಬಾರಿ ಕೇವಲ ಚಿತ್ರದುರ್ಗಕ್ಕೆ ಮಾತ್ರ ಎಡಗೈ ಸಮುದಾಯಕ್ಕೆ ನೀಡಲಾಗಿದೆ.
ಕೋಲಾರದಲ್ಲಿ ಬಲಗೈ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಅಲ್ಲಿನ ನಾಯಕರು ಒತ್ತಾಯ ಮಾಡುತ್ತಿದ್ದಾರೆ. ಇದು ಎಡಗೈ ಸಮುದಾಯಕ್ಕೆ ಅನ್ಯಾಯ ಮಾಡಿದ ಹಾಗೆ ಆಗುತ್ತದೆ. ಹೀಗೆ ಮಾಡುವುದರಿಂದ ಎಡಗೈ ಸಮುದಾಯದ ವಿರೋಧ ಕಟ್ಟಿಕೊಂಡು ಹಾಗೆ ಆಗುತ್ತದೆ. ಮತ್ತು ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ನ್ನು ಕಲ್ಯಾಣ ಕರ್ನಾಟಕದ ಭಾಗದ ಮೀಸಲು ಕ್ಷೇತ್ರಗಳಲ್ಲಿ ಒಂದು ಕ್ಷೇತ್ರವನ್ನು ಎಡಗೈ ಸಮುದಾಯಕ್ಕೆ ಕೊಡದೆ ಅನ್ಯಾಯವಾಗಿರುತ್ತದೆ. ಆದ್ದರಿಂದ ಪಕ್ಷದ ವರಿಷ್ಠರು ಇದನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು.
ಇದ್ದ ಸಂಪ್ರದಾಯದ ಹಾಗೆ ಕೋಲಾರದಲ್ಲಿ ಎಡಗೈ ಸಮುದಾಯಕ್ಕೆ ಟಿಕೆಟ್ ನೀಡಬೇಕು.
ರಾಜ್ಯದಲ್ಲಿ ಸುಮಾರು 80 ಲಕ್ಷ ಮತದಾರರನ್ನು ಹೊಂದಿರುವ ಈ ಸಮುದಾಯವನ್ನು ರಾಜಕೀಯವಾಗಿ ಎತ್ತುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಮಾಡಬೇಕು.