
ವಿಜಯನಗರ ಜಿಲ್ಲಾ ವಕೀಲರ ಸಂಘ : ಮತದಾನ ಜಾಗೃತಿ
ಕರುನಾಡ ಬೆಳಗು ಸುದ್ದಿ
ವಿಜಯನಗರ, 5- ವಿಜಯನಗರ ಜಿಲ್ಲಾ ವಕೀಲರ ಸಂಘ ಹೊಸಪೇಟೆಯಲ್ಲಿ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಕುರಿತು ನಗರದಲ್ಲಿ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದರು.
ಕೋರ್ಟ್ ಆವರಣದಿಂದ ಶಾನಬಾಗ ಸರ್ಕಲ್ ನಿಂದ ಹೊರಟು ನಗರದ್ಯಂತ ಹಲವು ಸ್ಥಳಗಳಲ್ಲಿ ಪ್ರಚಾರ ಮಾಡುತ್ತಾ ವಿಜಯನಗರ ಕಾಲೇಜು ರಸ್ತೆಯ ಮೂಲಕ ಮತದಾನ ಜಾಗೃತಿ ಅಭಿಯಾನವನ್ನು ನಡೆಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ. ಶ್ರೀನಿವಾಸ್ ಮೂರ್ತಿ ಪ್ರಜಾಪ್ರಭುತ್ವದ ಉಳಿವಿಗಾಗಿ ಪ್ರತಿಯೊಬ್ಬರು ಬಿಸಿಲು ಎನ್ನದೆ ತಪ್ಪದೆ ಮತದಾನ ಮಾಡಿ. ನಮ್ಮ ಹಕ್ಕನ್ನು ಚಲಾಯಿಸಬೇಕೆಂದು ನಾವೆಲ್ಲರೂ ಭಾರತದ ಸಂವಿಧಾನ ಅಡಿಯಲ್ಲಿ ಒಂದಾಗಿ ಬಾಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು ಕೆ.ಪ್ರಹ್ಲಾದ್ ಹಾಗೂ ಉಪಾಧ್ಯಕ್ಷರು ಹೆಚ್ ಎಂ ಮಂಜುನಾಥ್ ಹಾಗೂ ಪ್ರಚಾರದಲ್ಲಿ ಎಲ್ಲಾ ಸರ್ವ ಸದಸ್ಯರು ಭಾಗಿಯಾಗಿದ್ದರು.