
ವಿಎನ್ಸಿ ಕಾಲೇಜ್ ನ ಕ್ರೀಡಾಪಟುಗಳಿಗೆ ಸನ್ಮಾನ
ಕರುನಾಡ ಬೆಳಗು ಸುದ್ದಿ
ಹೊಸಪೇಟೆ( ವಿಜಯನಗರ ),೨೦- ಕ್ರೀಡೆಗಳಲ್ಲಿ ದಕ್ಷಿಣ ಭಾರತ ಯುನಿವರ್ಸಿಟಿ ಲೆವೆಲ್ ಕ್ರೀಡಾ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದು ಮಹಾವದ್ಯಾಲಯಕ್ಕೆ ಹೆಸರು ತಂದ ಕ್ರೀಡಾಪಟುಗಳನ್ನು ಇಂದು ಸನ್ಮಾನಿಸಲಾಯಿತು.
ವಿಜಯನಗರ ಮಹಾವಿದ್ಯಾಲಯದ ಅಧ್ಯಕ್ಷರಾದ, ಅಸುಂಡಿ ನಾಗರಾಜ ಗೌಡ ಈ ಸಂದರ್ಭದಲ್ಲಿ ಮಾತನಾಡುತ್ತಾ ನಮ್ಮ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳು, ವೆಯಿಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್, ಮತ್ತು ವಾಲಿಬಾಲ್ ಟೂರ್ನಮೆಂಟ್ ಕ್ರೀಡಾ ಸ್ಪರ್ಧೆಗಳಲ್ಲಿ ಪ್ರತಿಷ್ಠಾತ್ಮಕವಾದ ದಕ್ಷಿಣ ಭಾರತದ ವಿಶ್ವವಿದ್ಯಾಲಯದ ಲೆವೆಲ್ ನಲ್ಲಿ ಪ್ರಥಮ ಸ್ಥಾನದಲ್ಲಿರುವುದು ಅತ್ಯಂತ ಹೆಮ್ಮೆಯ ವಿಷಯ ಅಂದರು.
ವಿದ್ಯಾರ್ಥಿಗಳು ತಮ್ಮ ಅಭ್ಯಾಸದ ಜೊತೆಗೆ, ಕ್ರೀಡೆಗಳಲ್ಲಿ ಪಾಲ್ಗೊಂಡು ಪ್ರಥಮ ಸ್ಥಾನ ಪಡೆದು ನಮ್ಮ ಕಾಲೇಜಿಗೆ ಒಳ್ಳೆಯ ಹೆಸರನ್ನು ತಂದಿದ್ದಾರೆ ಎಂದರು. ಇದೇ ರೀತಿಯಾಗಿ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಅಭ್ಯಾಸದ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು ಈ ಸಂದರ್ಭವಾಗಿ ಕಾರ್ಯಕ್ರಮದಲ್ಲಿ, ಕಾಲೇಜಿನ ಪ್ರಿನ್ಸಿಪಲ್, ಶುಭಾಶಯಗಳು ಮತ್ತು, ಕ್ರೀಡೆಗಳ ಕೋಚ್ ಕರಿಬಸಯ್ಯ, ಕಾಲೇಜನ ಉಪನ್ಯಾಸಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.