IMG_20240216_202345

ವಿದ್ಯಾರ್ಥಿಗಳು ಕೀಳರಿಮೆಯಿಂದ ಹೊರ ಬನ್ನಿ : ಪ್ರೊ.ಬಿ.ಕೆ ರವಿ

ಕರುನಾಡ ಬೆಳಗು ಸುದ್ದಿ

ಕೊಪ್ಪಳ,17-  ಸಂವಿಧಾನದ ಅಡಿಯಲ್ಲಿ ಸರ್ವರಿಗೂ ಸಮಾನ ಅವಕಾಶಗಳಿವೆ ಆದ್ದರಿಂದ ವಿದ್ಯಾರ್ಥಿಗಳು ಕೀಳರಿಮೆ ಮನಸ್ಥಿತಿಯಿಂದ ಹೊರ ಬನ್ನಿ ಎಂದು ಕುಲಪತಿ ಪ್ರೊ.ಬಿ.ಕೆ ರವಿ ಹೇಳಿದರು.

ಅವರು ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ನಡೆದ ಅರಿವಿನೆಡೆಗೆ ಸ್ನಾತಕೋತ್ತರ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಾಣ, ದಡ್ಡ ಎಂಬ ವಿದ್ಯಾರ್ಥಿಗಳ ವಿಂಗಡನೆ ಸಲ್ಲದು ಅವಕಾಶ ಸಿಕ್ಕರೆ ಎಲ್ಲಾ ವಿದ್ಯಾರ್ಥಿಗಳು ಜಾಣರೆ ಆದ್ದರಿಂದ ವಿದ್ಯಾರ್ಥಿಗಳು ಅವರಿಗೆ ಆಸಕ್ತಿ ಇರುವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಳ್ಳುವುದರ ಮುಖಾಂತರ ಇತರರಿಗೆ ಮಾದರಿಯಾಗಬೇಕು. ಅವಶ್ಯಕತೆಗನುಗುಣವಾಗಿ ಮೊಬೈಲ್ ಬಳಕೆಯ ಮಾಡಬೇಕು ಅದನ್ನು ಅತೀಯಾಗಿ ಬಳಸಿದರೆ ಮಾನಸಿಕ ಮತ್ತು ಶೈಕ್ಷಣಿಕ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಅದು ಯುವ ಜನತೆಗೆ ಎಚ್ಚರಿಕೆ ಗಂಟೆಯಾಗಿದೆ ಇಲ್ಲವಾದರೆ ಅದು ವಿದ್ಯಾರ್ಥಿಗಳ ಓದಿಗೆ ಕಂಠಕವಾಗುವ ಸ್ಥಿತಿ ನಿರ್ಮಾಣವಾಗುತ್ತದೆ ಆದ್ದರಿಂದ ವಿದ್ಯಾರ್ಥಿಗಳು ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ನಿವೃತ್ತ ಪ್ರೊ. ಬಸವರಾಜ ಸಬರದ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಕಾಲಹರಣ ಮಾಡದೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚು ಶ್ರಮವಹಿಸಿ ಓದಿದರೆ ಮಾತ್ರ ಯಶಸ್ಸು ಸಾಧ್ಯ. ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಶ್ವವಿದ್ಯಾಲಯ ಆರಂಭವಾಗಿದ್ದು ಜಿಲ್ಲೆಯ ಜನರಿಗೆ ಸಂತಸ ತಂದಿದೆ. ಡಾ.ಬಿ.ಆರ್ ಅಂಬೇಡ್ಕರ್ ಅವರು ಸತತ ಪರಿಶ್ರಮದಿಂದ ಸಂವಿಧಾನ ಕೊಡುಗೆ ಸಾಧ್ಯವಾಯಿತು. ಅವರಿಗೆ ಆರ್ಥಿಕ ತೊಂದರೆಗಳಿದ್ದರೂ ಎದೆ ಗುಂದದೆ ತಮ್ಮ ಗುರಿ ಸಾಧನೆ ಕಡೆಗೆ ಗಮಹರಿಸಿ ಶ್ರೇಷ್ಠ ವ್ಯಕ್ತಿಯಾದರು. ಅದರಂತೆ ಇಂದು ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಉತ್ತಮ ಹವ್ಯಾಸಗಳನ್ನು ರೂಢಿಸುಕೊಳ್ಳುವ ಅಗತ್ಯವಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸಾಹಿತಿ ವಿಜಯಾ ಸಬರದ ಮಾತನಾಡಿ ವಿದ್ಯಾರ್ಥಿಗಳು ಕಲಿಕೆಯಿಂದ ಮಾನವೀಯ ಮೌಲ್ಯಗಳನ್ನು ಮತ್ತು ವೃತ್ತಿ ಕೌಶಲಗಳನ್ನು ಪಡೆದುಕೊಳ್ಳಬೇಕು. ಗಂಡು ಹೆಣ್ಣು ಎಂಬ ಬೇಧ ಭಾವಗಳನ್ನು ಹೊಂದಿದೆ ಪರಸ್ಪರ ಗೌರವಯುತವಾಗಿ ನಡೆದುಕೊಳ್ಳುವುದರ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದರು.

ನಿರ್ದೇಶಕ ಪ್ರೋ.ಚನ್ನಬಸವಪ್ಪ ಚಲವಾದಿ ಮಾತನಾಡಿ ವಿಶ್ವವಿದ್ಯಾಲಯಗಳು ಜ್ಞಾನದ ದೇಗುಲಗಳಿದ್ದಂತೆ, ಅವು ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದು ನುಡಿದರು.

ಕನ್ನಡ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿನಿಯರಾದ ಕು.ವರ್ಷಿಣಿ ಪ್ರಾರ್ಥನೆಗೀತೆ ಹಾಡಿದರು, ಶಿಲ್ಪಾ ಮತ್ತು ಪಾರ್ವತಿ ನಿರೂಪಿಸಿದರು. ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿ ಬಸವರಾಜ್ ಸ್ವಾಗತಿಸಿದರು. ರಾಜ್ಯಶಾಸ್ತ್ರ, ಕನ್ನಡ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಗಳ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!