
ಬಳ್ಳಾರಿ ಜಿಲ್ಲಾ ಇಂಡಸ್ಟ್ರಿಯಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ವಿ. ರಾಮಚಂದ್ರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,25- ಬಳ್ಳಾರಿ ಜಿಲ್ಲಾ ಇಂಡಸ್ಟ್ರಿಯಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಜಂಟಿ ಕಾರ್ಯದರ್ಶಿ ವಿ. ರಾಮಚಂದ್ರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಭಾರತ್ ಬಿಸ್ಕೇಟ್ನ ಜಿ. ವಾಸುದೇವ್, ಜಂಟಿ ಕಾರ್ಯದರ್ಶಿಯಾಗಿ ಜಿ. ಮಲ್ಲಿಕಾರ್ಜುನಗೌಡ, ಉಪಾಧ್ಯಕ್ಷರಾಗಿ ಜೆ. ಅಂಕಾರಾವ್, ಖಜಾಂಚಿಯಾಗಿ ಡಿ. ಪವನ್ ಕುಮಾರ್ ರೆಡ್ಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ. ಮಹಾರುದ್ರಗೌಡ, ಹಿರಿಯ ಉಪಾಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ, ಜಂಟಿ ಕಾರ್ಯದರ್ಶಿ ಡಾ. ಮರ್ಚೇಡ್ ಮಲ್ಲಿಕಾರ್ಜುನ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ. ಸತ್ಯಬಾಬು, ಟಿ. ಶ್ರೀನಿವಾಸರಾವ್, ಶೇಷರೆಡ್ಡಿ, ಬಿ. ವೆಂಕಟೇಶಲು, ವಿಶೇಷ ಆಹ್ವಾನಿತರಾಗಿರುವ ಕೆ.ಎಂ. ಶಿವಮೂರ್ತಿ ಇನ್ನಿತರರು ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದ್ದಾರೆ.