ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸರಕಾರಿ ನೌಕರರ ಪ್ರತಿಭಟನೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 12- ಏಳನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿ ,ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಶುಕ್ರವಾರ ಬೆಳಿಗ್ಗೆ ನಗರದ ಪ್ರವಾಸಿ ಮಂದರಿದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಯವ ಮೂಲಕ ಆಗ್ರಹಿಸಿದರು.
ಸರ್ಕಾರ 7 ನೇ ವೇತನ ಆಯೋಗದ ವರದಿ ಯಥಾವತ್ ಜಾರಿಯಾಗಬೇಕು, ರಾಜ್ಯ ಸರ್ಕಾರದ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನವಾಗಬೇಕು,ಎನ್ ಸಿ ಪಿ ರದ್ದುಘೋಳಿಸಿ ಹಳೇ ಪಿಂಚಣಿ ಯೊಜನೆ ಜಾರಿಯಾಗಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೆರಿಸುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಎಚ್ಚರಿಕೆ ; ರಾಜ್ಯ ಸರ್ಕಾರ ನೌಕರರ ತಾಳ್ಮೆ ಯನ್ನು ಪರೀಕ್ಷೆ ಮಾಡದೆ ತಕ್ಷಣ ನಮ್ಮ ಬೇಡಿಕೆ ಈಡೇರಿಸಬೇಕು ಇಲ್ಲದಿದ್ದಲ್ಲಿ ಹಂತ ಹಂತವಾಗಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿದರು.
ಈ ಸಂಧರ್ಭದಲ್ಲಿ ರಾಜ್ಯ ಸರ್ಕಾರಿ ನೌಕರ ಸಂಘದ ರಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮನ್ನ ನವರ ಹಾಗೂ ಜಿಲ್ಲಾ ಕಾರ್ಯದರ್ಶಿ ಶಂಕರಗೌಡ ಮಾಲಿಪಾಟೀಲ್ , ಮುಖಂಡರಾದ ಶರಣೆಗೌಡ ಪಾಟೀಲ್, ವೆಂಕಟೇಶ ಕುಲಕರ್ಣಿ, ಶಿವಪ್ಪ ಜೋಗಿ , ಬಾಳಪ್ಪ ಕಾಳಿ, ಬಸಯ್ಯ ಹೊಳ್ಳಿ, ವೆಂಕಟೇಶ ದೇಶಪಾಂಡೆ, ಮಾರ್ತಡಂರಾವ ದೇಸಾಯಿ , ಆಸೀಫ್ ಅಲಿ ಇತತರು ಇದ್ದರು.
