
ಶ್ರೀ ಅಗ್ನಿ ಬನ್ನಿರಾಯ ಸ್ವಾಮಿ ಜಯಂತಿ : ಪುಷ್ಪನಮನ ಸಲ್ಲಿಕೆ
ಕರುನಾಡ ಬೆಳಗುನ ಸುದ್ದಿ
ಕೊಪ್ಪಳ,28- ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಅಗ್ನಿ ಬನ್ನಿರಾಯ ಸ್ವಾಮಿ ಜಯಂತಿ ಆಚರಿಸಲಾಯಿತು.
ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಶ್ರೀ ಅಗ್ನಿ ಬನ್ನಿರಾಯ ಸ್ವಾಮಿ ರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ, ಜಿಲ್ಲಾಧಿಕಾರಿ ಕಚೇರಿಯ ಜಗದೀಶ್, ಸಲೀಂ, ಮಹೇಂದ್ರ ಸಾಲಿಮನಿ, ಈರಣ್ಣ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.