PHOTOS

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಗೊಳಿಸಿ

ಕರುನಾಡ ಬೆಳಗು ಸುದ್ದಿ

 

ವಿಜಯನಗರ,19- ಹೊಸಪೇಟೆ ತಾಲ್ಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಹೊಸಪೇಟೆ ತಹಶೀಲ್ದಾರರು ಹಾಗೂ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ತಾಲ್ಲೂಕು ಮಟ್ಟದ ಜಾಗೃತಿ ಸಮಿತಿ ಅಧ್ಯಕ್ಷರಾದ ವಿಶ್ವಜೀತ್ ಮೇಹತ್ ಹೇಳಿದರು.

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಕುರಿತು ಜನವರಿ 18ರಂದು ಹೊಸಪೇಟೆ ತಹಶೀಲ್ದಾರರ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು, ಸಂವಿಧಾನ ರಚನೆಗೊಂಡು 75 ವರ್ಷಗಳ ಚಾಲ್ತಿಯಲ್ಲಿರುವುದರಿಂದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ರಾಷ್ಟ್ರೀಯ ಮಟ್ಟದ ಸಮಾವೇಶವನ್ನು ನಡೆಸಲು ಸರ್ಕಾರವು ನಿರ್ಧರಿಸಿದೆ. ವಿಜಯನಗರ ಜಿಲ್ಲೆಯ ಎಲ್ಲಾ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳ ಮುಖಾಂತರ ಸ್ಥಬ್ದ ಚಿತ್ರದೊಂದಿಗೆ ಮೇರವಣೆಗೆ ಹಾಗೂ ಇನ್ನೀತರೆ ಕಾರ್ಯಕ್ರಮವನ್ನು ಯಶ್ವಸಿಯಾಗಿ ನಡೆಸಲು ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಸಮಿತಿಯನ್ನು ರಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಿತಿ ಅಧಿಕಾರಿಗಳು ಜಬಾವ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಭಾತರದ ಸಂವಿಧಾನದ ಆಚರಣೆ ಮತ್ತು ಅದರ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜನವರಿ 26ರ ಗಣಾರಾಜ್ಯೋತ್ಸವ ಸಮಾರಂಭದಲ್ಲಿ ಸ್ಥಬ್ದಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ ನೀಡುವರು. ಮೂರು ದಿನಗಳ ಹೊಸಪೇಟೆ ತಾಲ್ಲೂಕಿನಲ್ಲಿ ಒಟ್ಟು 14 ಗ್ರಾಮ ಪಂಚಾಯತಿಗಳ ಮುಖಾಂತರ ಸ್ಥಬ್ದಚಿತ್ರದ ಮೇರೆವಣೆಗೆ ನಡೆಯಲಿದ್ದು, ಈ ಜಾಥಾ ಕಾರ್ಯಕ್ರಮವನ್ನು ಯಶ್ವ್ವಸಿಗೆ ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಪೊಲೀಸ್ ಉಪ ಅಧೀಕ್ಷಕರು, ತಾಲ್ಲೂಕು ಶಿಕ್ಷಾಣಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ತಾಲ್ಲೂಕು ವಿಸ್ತಿರ್ಣಾಧಿಕಾರಿಗಳು ಅಲ್ಪ ಸಂಖ್ಯಾತರ ಇಲಾಖೆ, ಹಾಗೂ ಸದಸ್ಯ ಕಾರ್ಯದರ್ಶಿಗಳು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಸೇರಿದಂತೆ ಮತ್ತಿತರರಿದ್ದರು.

Leave a Reply

Your email address will not be published. Required fields are marked *

error: Content is protected !!