
ಸಂವಿಧಾನ ಜಾಗೃತಿ ಜಾಥಾ: ಗುಳದಳ್ಳಿಯಲ್ಲಿ ಅದ್ದೂರಿ ಸ್ವಾಗತ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,2- ಸಂವಿಧಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕೊಪ್ಪಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜನವರಿ 26 ರಿಂದ ಫೆಬ್ರವರಿ 02 ವರೆಗೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅದರಂತೆ ಗುಳದಳ್ಳಿ ಗ್ರಾಮದಲ್ಲಿ ಜಾಥಾ ಮೆರವಣಿಗೆಗೆ ಅದ್ದೂರಿ ಸ್ವಾಗತ ದೊರೆತಿದ್ದು, ಗ್ರಾಮದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಜಾಥಾ ಮೆರವಣಿಗೆ ನಡೆಯಿತು.
ಈ ಸಂದರ್ಭ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು(ಗ್ರೇಡ್-1) ಶಾಹೇಖಾ ಅಹ್ಮದಿ, ಗ್ರಾಮದ ಗುರು ಹಿರಿಯರು, ಗ್ರಾಮಸ್ಥರು ಭಾಗವಹಿಸಿದ್ದರು.
ಜಾಥಾವು ಗುಳದಳ್ಳಿಯಿಂದ ಇರಕಲ್‌ಗಡಾ, ಹಾಸಗಲ್, ಚಿಕ್ಕಬೊಮ್ಮನಾಳ, ಬಾನಾಪೂರಗೆ ತೆರಳಿ ನಂತರ ತಳಕಲ್‌ನಲ್ಲಿ ವಾಸ್ತವ್ಯ ಮಾಡಲಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.