
ಸಮುದಾಯ ಆಧಾರಿತ ಸಂಸ್ಥೆಗಳ ಒಗ್ಗೂಡುಸುವಿಕೆಯಲ್ಲಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹತ್ತರ ಪಾತ್ರ : ದುಂಡಪ್ಪ ತುರಾದಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 8-ತಾಲೂಕ ಪಂಚಾಯತನ ಸಾಮರ್ಥ್ಯ ಸೌಧದಲ್ಲಿ, ಸಂಜೀವಿನಿ ಯೋಜನೆಯ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (LCRP) 6 ದಿನಗಳ ತರಬೇತಿ ಕಾರ್ಯಾಗಾರವನ್ನು ಕಾರ್ಯನಿರ್ವಾಹಕ ಅಧಿಕಾರಿಯವರಿಂದ ಸಸಿಗೆ ನೀರುಣಿಸುವ ಮೂಲಕ ಉದ್ಘಾಟನೆ.
2024-25ನೇ ಸಾಲಿನ ಹಣಕಾಸು ವರ್ಷದಲ್ಲಿ ಪಂಚಾಯತ್ ರಾಜ್ ಸಂಸ್ಥೆ ಹಾಗೂ ಸಮುದಾಯ ಆಧಾರಿತ ಸಂಸ್ಥೆಗಳ ಒಗ್ಗೂಡಿಸುವಿಕೆ (PRI-CBO Convergence) ಯೋಜನೆಯನ್ನು ಕೊಪ್ಪಳ ಜಿಲ್ಲೆಯಲ್ಲಿ ಕೊಪ್ಪಳ ಮತ್ತು ಗಂಗಾವತಿ ತಾಲೂಕಗಳಲ್ಲಿ ಅನುಷ್ಟಾನವಾಗುತ್ತಿದ್ದು, ಪ್ರಸ್ತುತ ಕೊಪ್ಪಳ ತಾಲೂಕಿನ ಆಯ್ದ 10 ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನ ಮಾಡುವ ಸಲುವಾಗಿ ಸಂಜೀವಿನಿ ಯೋಜನೆಯಡಿ ರಚನೆಗೊಂಡ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (LCRP) 6 ದಿನಗಳ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಸದರಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾನ್ಯರು ಮಾತನಾಡುತ್ತಾ, ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ಸಮುದಾಯ ಆಧಾರಿತ ಸಂಸ್ಥೆಗಳ ಒಗ್ಗೂಡುಸುವಿಕೆಯಲ್ಲಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಪಾತ್ರ ಮಹತ್ತರವಾಗಿದ್ದು, ಸರಕಾರ ಮತ್ತು ಸ್ವ-ಸಹಾಯ ಸಂಘದ ನಡುವೆ ಕೊಂಡಿಯಾಗಿ ಕೆಲಸ ನಿರ್ವಹಿಸಬೇಕಾಗುತ್ತದೆಂದು ಹೇಳಿದರು.
ಮತ್ತು ಕೇರಳ ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡ PRI-CBO Convergence ಯೋಜನೆಯನ್ನು ನಮ್ಮ ಕೊಪ್ಪಳ ತಾಲೂಕಿನಲ್ಲಿಯು ಕೂಡಾ ಸಮರ್ಪಕವಾಗಿ ಅನುಷ್ಠಾನ ಮಾಡುವುದು ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳುತ್ತಾ, ಗ್ರಾಮೀಣ ಭಾಗದ ಪ್ರತಿ ಬಡಕುಟುಂಬಕ್ಕೆ ದೊರಕಬಹುದಾದ ಮೂಲಭೂತ ಸೌಕರ್ಯಗಳನ್ನು ಕೊಡಿಸುವ ನಿಟ್ಟಿನಲ್ಲಿ ನೀವೆಲ್ಲರೂ ಕಾರ್ಯೋಮ್ಮುಖರಾಗಿ ಈ ಒಂದು ತರಬೇತಿ ಕಾರ್ಯಾಗಾರವನ್ನು ಯಶಸ್ವಿಗೊಳಿಸಬೇಕಾಗಿ ಕರೆ ನೀಡಿದರು.
ಹಾಗೂ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಮತ್ತು ಸಮುದಾಯ ಆಧಾರಿತ ಸಂಸ್ಥೆಗಳು ಒಂದುಗೂಡಿ ಕಾರ್ಯನಿರ್ವಹಿಸಿದ್ದಲ್ಲಿ ಗ್ರಾಮೀಣ ಭಾಗದಲ್ಲಿನ ಬಡತನವನ್ನು ಸುಲಭವಾಗಿ ನಿವಾರಣೆ ಮಾಡಬಹುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಜೀವಿನಿ ಯೋಜನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಸುನೀಲ್, ವಲಯ ಮೇಲ್ವಿಚಾಕರಾದ ವೆಂಕಟೇಶ, PRI-CBO ಮೆಂಟರ್ ರಾದ ಅಜಿಷಾ, ತಾಲೂಕು ಸಂಪನ್ಮೂಲ ವ್ಯಕ್ತಿ ಶ್ರೀದೇವಿ, BRP-EP ಸವಿತಾ ಹಾಗೂ ಹತ್ತು ಗ್ರಾಮ ಪಂಚಾಯತಿಯ 30 ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.