ಸರಕಾರ ಪತನ ಬಿಜೆಪಿಗರ ಹಗಲು ಗನಸು
ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಆರೋಪ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 02- ರಾಜ್ಯ ಸರಕಾರ ಸುಭದ್ರವಾಗಿರಲಿದ್ದು, ಯಾವುದೇ ಕಾರಣಕ್ಕೂ ಬಿಳುವುದಿಲ್ಲ ಬಿಜೆಪಿಗರ ಹಗಲು ಗನಸು ಕಾಣುತ್ತಿದ್ದಾರೆ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಆರೋಪಿಸಿದರು.
ತಾಲೂಕಿನ ಬಸಾಪೂರ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರ ಸುಭದ್ರವಾಗಿದೆ ಇದೆಲ್ಲ ಬಿಜೆಪಿಗರ ಸೃಷ್ಟಿ ಎಂದರು
ರಾಜ್ಯದ ಜನರು ನಮಗೆ ಹೆಚ್ಚಿನ ಬಹುಮತ ನೀಡಿರುವುದರಿಂದ ಬಿಜೆಪಿಗರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಹಾಗಾಗಿ ನಮ್ಮ ಸರಕಾರ ಅಸ್ಥಿರತೆ ಬಗ್ಗೆ ಇಲ್ಲಸಲ್ಲದ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ನಮ್ಮ ಶಾಸಕರಲ್ಲಿ ಯಾವುದೇ ಗೊಂದಲವಿಲ್ಲ. ಗ್ಯಾರಂಟಿ ಯೋಜನೆಯಿಂದ ರಾಜ್ಯ ಅಭಿವೃದ್ಧಿಯಾಗುತ್ತಿದೆ.
ಸ್ವಲ್ಪ ದಿನ ಕಳೆದ ನಂತರ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಅನುದಾನ ನೀಡುವ ಭರವಸೆ ನೀಡಿದ್ದಾರೆ. ಹಾಗಾಗಿ ನಮ್ಮ ಸರಕಾರ ಸುಸೂತ್ರವಾಗಿ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ರಾಜಶೇಕರ ಹಿಟ್ನಾಳ. ಶಿವಕುಮಾರ ಪಾವಲಿ ಶೆಟ್ರ. ಅಮರೇಶ ಉಪಲಾಪೂರ ಇತರರು ಇದ್ದರು.
