ಸಾರ್ವಜನಿಕರಿಂದ ಕುಂದು ಕೊರತೆ ಮತ್ತು ಅಹವಾಲು ಸ್ವೀಕಾರ ಸಭೆ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ,13- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ಅಧಿಕಾರಿ ಕಚೇರಿ ಸಭಾಭವನದಲ್ಲಿ ಕರ್ನಾಟಕ ಸರ್ಕಾರ ಕರ್ನಾಟಕ ಲೋಕಾಯುಕ್ತ ಬಳ್ಳಾರಿ ತಾಲೂಕು ಆಡಳಿತ ತಾಲೂಕು ಪಂಚಾಯತ್ ಸಹಯೋಗದಲ್ಲಿ ಸಾರ್ವಜನಿಕರಿಂದ ಕುಂದು ಕೊರತೆ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮದ ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತ ಸಂಗಮೇಶ ಸಿಪಿಐ ಬಳ್ಳಾರಿ ತಹಶೀಲ್ದಾರ್ ಶಂಶೆ ಆಲಂ ತಾಲ್ಲೂಕ್ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್ ಪವನ್ ಕುಮಾರ್ ತಂಡಪ್ಪನವರ್ ಅವರ ಸಮ್ಮುಖದಲ್ಲಿ ವಿವಿಧ ಇಲಾಖೆಗಳ 11 ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆ ಯಾದವು ಲೋಕಾಯುಕ್ತರು ಅರ್ಜಿಗಳನ್ನು ಸ್ವೀಕರಿಸಿ ಮಾತನಾಡಿ ವಿವಿಧ ಇಲಾಖೆಗಳೊಂದಿಗೆ ಚರ್ಚೆ ನಡೆಸಿದರು ಶೀಘ್ರವೇ ಪರಿಹಾರ ಮಾಡಬೇಕು ಎಂದು ಅವರು ಸೂಚನೆ ನೀಡಿದರು.
ತಹಸಿಲ್ದಾರ್ ಶಂಶೇ ಆಲಂ ಅವರು ಮಾತನಾಡಿ ಲೋಕಸಭಾ ಚುನಾವಣೆ ನಿಮಿತ್ತ ಸರ್ಕಾರ ವರ್ಗಾವಣೆ ಮಾಡಿದ್ದು ಮುಂಬರುವ ದಿನಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯನ್ನು ಸಿರುಗುಪ್ಪ ವಿಧಾನಸಭಾ ಕ್ಷೇತ್ರದಲ್ಲಿ ಅಚ್ಚುಕಟ್ಟಾಗಿ ಶಾಂತಿಯುತವಾಗಿ ನಡೆಸಲು ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಹೇಳಿದರು ತಾಲೂಕಿನ ವಿಧಾನಸಭಾ ಕ್ಷೇತ್ರದಲ್ಲಿ ನಾಗರಿಕರು ಸಂಘ ಸಂಸ್ಥೆಗಳ ಮುಖಂಡರು ಸಲಹೆ ಸಹಕಾರ ನೀಡಬೇಕು ಎಂದು ಅವರು ವಿನಂತಿಸಿಕೊಂಡರು.
ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ವೈ ಎಸ್ ಹನುಮಂತಪ್ಪ, ತಾಲೂಕ ಆರೋಗ್ಯ ವೈದ್ಯಾಧಿಕಾರಿ ಡಾ.ಬಿ.ಈರಣ್ಣ, ಸಂಪನ್ಮೂಲ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ತಮ್ಮನಗೌಡ ಪಾಟೀಲ್, ಕೆಎಸ್ಆರ್ಟಿಸಿ ಅಧಿಕಾರಿ ತಿರುಮಲೇಶ್, ಸಿಡಿಪಿಓ ಪ್ರದೀಪ್ ಕುಮಾರ್, ಕಂದಾಯ ಇಲಾಖೆಯ ಶೇಕ್ಷವಲಿ, ನಗರಸಭಾ ಅಧಿಕಾರಿಗಳಾದ ರಾಜಬಕ್ಷಿ ವೆಂಕೋಬ, ತಾಲೂಕ್ ಪಂಚಾಯತ್ ವ್ಯವಸ್ಥಾಪಕಿ ಸುಜಾತ ಕೋರಿ, ರಾಷ್ಟ್ರೀಯ ಸಾಕ್ಷರತಾ ಸಮಾಜ ಸೇವಕ ಅಬ್ದುಲ್ ನಬಿ, ಜೆಸ್ಕಾಂ ಅಧಿಕಾರಿ ನವೀನ್ ಕುಮಾರ್, ಕಾರ್ಮಿಕ ಇಲಾಖೆ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕೃಷಿ ತೋಟಗಾರಿಕೆ ಅರಣ್ಯ ಸಮಾಜ ಕಲ್ಯಾಣ ಮತ್ತು ಇತರೆ ಸಾರ್ವಜನಿಕರು ಇದ್ದರು.
