ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡಿ : ಡಾ.ಬಿ.ಈರಣ್ಣ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ -ತಾಲೂಕಿನ ಎಲ್ಲಾ ಆಯುಷ್ಮಾನ್ ಆರೋಗ್ಯ ಮಂದಿರಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಉತ್ತಮ ಆರೋಗ್ಯ ಮಂದಿರ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಗಳು ನೀಡಬೇಕು ಎಂದು ತಾಲೂಕ ಆರೋಗ್ಯ ವೈದ್ಯಾಧಿಕಾರಿ ಡಾ ಬಿ ಈರಣ್ಣ ಅವರು ಹೇಳಿದರು.
ಸಿರುಗುಪ್ಪ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಸಭಾಂಗಣದಲ್ಲಿ ರಾಷ್ಟ್ರೀಯ ಗುಣಮಟ್ಟ ಭರವಸೆಯ ಮಾನ ದಂಡಗಳು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು ಹಾಗೂ ಉಪ ಕೇಂದ್ರಗಳಿಗೆ ಬೇಕಾಗುವ ಸೇವೆ ಮತ್ತು ಗುಣಮಟ್ಟ ಮಾನ ದಂಡಗಳಿಗೆ ಸಂಬಂಧಿಸಿದಂತೆ ಉತ್ತಮ ಸೇವೆ ಹಾಗೂ ಶುಚಿಯಾದ ವಾತಾವರಣ ದಡಿಯಲ್ಲಿ ಚಿಕಿತ್ಸೆ ನೀಡುವಿಕೆ ಹಾಗೂ ಲಭ್ಯವಿರುವ ಸೇವೆಗಳ ಬಗ್ಗೆ ವಿವರಿಸಿದ ನೀಡುವ ಪ್ರಕ್ರಿಯೆ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ ಈ ತರಬೇತಿ ಕಾರ್ಯಕ್ರಮವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಲ್ಲರೂ ಸೂಕ್ತ ದಾಖಲಾತಿ ಇಡಬೇಕು ಡಾ ವಿದ್ಯಾಶ್ರೀ ರಾಜ್ಯಮಟ್ಟದಿಂದ ತರಬೇತುದಾರರಾಗಿ ಆಯ್ಕೆ ಆಗಿದ್ದು ಅವರ ಉತ್ತಮ ಮಾರ್ಗದರ್ಶನದಲ್ಲಿ ನಡೆಯುವಂತೆ ಅವರು ಸೂಚಿಸಿದರು.
ಕುರುವಳ್ಳಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳು ಹಾಗೂ ತರಬೇತಿದಾರಾರಾದ ಡಾ ವಿದ್ಯಾಶ್ರೀ ಮಾತನಾಡಿ ತಾಲೂಕಿನ 18 ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಪೂರ್ವ ತಯಾರಿಕೆಗಾಗಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರೊಜೆಕ್ಟರ್ ಮೂಲಕ ತರಬೇತಿ ನೀಡಿದರು.
ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಮೊಹಮ್ಮದ್ ಖಾಸಿಂ, ರಾಷ್ಟ್ರೀಯ ಸಾಕ್ಷರತಾ ಅಬ್ದುಲ್ ನಬಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ, ತಾಲೂಕು ಲೆಕ್ಕ ಪತ್ರ ಅಧಿಕಾರಿ, ತಾಲೂಕಿನ ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷ ಅಧಿಕಾರಿಗಳು ಹಾಗೂ ಆರೋಗ್ಯ ನಿರಕ್ಷಣಾಧಿಕಾರಿಗಳು ಭಾಗವಹಿಸಿದ್ದರು.
