ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಶ್ರೇಷ್ಠವಾಗಿದೆ : ಶ್ರೀ ನಾಗಭೂಷಣ ಶಿವಾಚಾರ್ಯ
ಕರುನಾಡ ಬೆಳಗು ಸುದ್ದಿ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಶ್ರೇಷ್ಠವಾಗಿದೆ ಮತದಾರರು ಯಾವುದೇ ಆಸೆ, ಆಮೀಷಕ್ಕೆ ಒಳಗಾಗದೆ ಮತದಾನ ಹಕ್ಕು ಚಲಾಯಿಸಬೇಕು ಎಂದು ಹೆಬ್ಬಾಳ ಮಠದ ಶ್ರೀ ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಅವರು ಹೇಳಿದರು.
ತಾಲೂಕಿನ ಸಿದ್ದಾಪುರ ಗ್ರಾಮದ ಎಪಿಎಂಸಿ ಕಲ್ಯಾಣ ಮಂಟಪದಲ್ಲಿ ಜರುಗಿದ ಚಿಕ್ಕಖೇಡೆದ್ ಬಂಧುಗಳ ಮದುವೆ ಸಮಾರಂಭದಲ್ಲಿ ತಾಲೂಕು ಸ್ವೀಪ್ ಸಮಿತಿಯಿಂದ ಆಯೋಜಿಸಲಾದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮೇ. ೦7 ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಪ್ಪದೇ ಮತ ಚಲಾಯಿಸಿ, ನಮ್ಮ ದೇಶವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಇಲ್ಲಿ ಎಲ್ಲರಿಗೂ ಮತದಾನದ ಹಕ್ಕಿದೆ. ದೇಶದ ಸುಭದ್ರ ಭವಿಷ್ಯಕ್ಕಾಗಿ ಪ್ರತಿಯೊಬ್ಬರ ಮತ ಅಗತ್ಯವಾಗಿದ್ದು ಪ್ರತಿಯೊಬ್ಬರು ಮತದಾನ ಮಾಡಿ ಎಂದರು.
ಪ್ರತಿಜ್ಞಾ ವಿಧಿ ಬೋಧನೆ: ನೂತನ ವಧುವರ ವೇದಿಕೆಯಲ್ಲಿ ಜಿಲ್ಲಾ ಸ್ವೀಪ್ ರಾಯಭಾರಿಯಾದ ಶ್ರೀ ಡಾ.ಶಿವಕುಮಾರ್ ಮಾಲಿ ಪಾಟೀಲ್ ಅವರು ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ವೇಳೆ ಜಿಲ್ಲಾ ಸ್ವೀಪ್ ರಾಯಭಾರಿ ಮಹೆಬೂಬ್ ಕಿಲ್ಲೆದರ್, ಗ್ರಾ.ಪಂ ಕಾರ್ಯದರ್ಶಿ ಮಹೆಬೂಬ್ ಸಾಬ್ , ತಾಲೂಕಾ ಸ್ವೀಪ್ ಸಮಿತಿ ಸದಸ್ಯರಾದ ಸೋಮನಾಥ ಸೇರಿ ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಅಂಗನವಾಡಿ,ಆಶಾ ಕಾರ್ಯಕರ್ತೆಯರು ಇದ್ದರು.
