WhatsApp Image 2024-03-02 at 6.04.10 PM

ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ

ಕರುನಾಡ ಬೆಳಗು ಸುದ್ದಿ

ವಿಜಯನಗರ,2- ಕನಕಗಿರಿ ಉತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹಂಪಿಯಲ್ಲಿ ವಾಸ್ತವ್ಯ ಹೂಡಲಿದ್ದು, ಭಾನುವಾರ ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಎಚ್.ಆರ್.ಗವಿಯಪ್ಪ ರವರು ಶನಿವಾರ ನಗರದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದು, ಇತರೆ ದೇಶದದಿಂದ ಆಗಮಿಸುವ ಪ್ರಾವಾಸಿಗರಿಂದ ಪೋಲಿಯೊ ವೈರಸ್ ಹರಡಬಹುದು ಎನ್ನುವ ಭೀತಿ ಇದೆ‌. ಈ ಹಿನ್ನಲೆಯಲ್ಲಿ ಕ್ಷೇತ್ರ ಹಾಗೂ ಜಿಲ್ಲೆಯ ಜನರು 5 ವರ್ಷದ ಎಲ್ಲಾ ಮಕ್ಕಳಿಗೂ ಪಲ್ಸ್ ಪೊಲೀಯೋ ಲಸಿಕೆ ಹಾಕಿಸಿ ಎಂದು ಶಾಸಕ ಎಚ್.ಆರ್.ಗವಿಯಪ್ಪ ಮನವಿ ಮಾಡಿದರು.

ಮುಂದಿನ ಆಯವ್ಯಯದಲ್ಲಿ ಅನುದಾನ ಭರವಸೆ : ಗ್ಯಾರೆಂಟಿ ಯೋಜನೆಗಳ ಜಾರಿಯಿಂದ ಹಣಕಾಸಿನ ಮೇಲಿನ ಒತ್ತಡ ಇರುವುದರಿಂದ ಈ ಬಾರಿ ಜಿಲ್ಲೆಗೆ ಹೆಚ್ಚಿನ ಅನುದಾನ ಲಭ್ಯವಾಗಿಲ್ಲ. ಬಹುದಿನಗಳಿಂದ ಚಿತ್ರದುರ್ಗ ಮೆಡಿಕಲ್ ಕಾಲೇಜಿಗೆ ಬೇಡಿಕೆ ಇದ್ದರಿಂದ ಅಲ್ಲಿಗೆ ಅನುದಾನವನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಬಹುದಿನಗಳಿಂದ ನೂತನ ವಿಜಯನಗರ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ಸಕ್ಕರೆ ಕಾರ್ಖಾನೆ ಸ್ಥಾಪನೆ ಬೇಡಿಕೆಯಿದೆ. ಮುಂದಿನ ವರ್ಷದ ಆಯವ್ಯಯದಲ್ಲಿ ಅನುದಾನ ಲಭಿಸುವ ವಿಶ್ವಾಸವನ್ನು ಶಾಸಕ ಎಚ್.ಆರ್.ಗವಿಯಪ್ಪ ವ್ಯಕ್ತಪಡಿಸಿದರು.

ಸಕ್ಕರೆ ಕಾರ್ಖಾನೆಗಾಗಿ ನಾಗೇನಹಳ್ಳಿ ಹತ್ತಿರದ ಗುರುತಿಸಿರುವ 77 ಎಕರೆ ಜಾಗ ಸೂಕ್ತವಾಗಿದೆ. ಇನ್ನೂ 10 ರಿಂದ 20 ಎಕರೆ ಜಾಗ ಲಭಿಸಬಹುದು. ಅಗತ್ಯ ಬಿದ್ದರೆ ಅಲ್ಪ ಪ್ರಮಾಣ ಭೂಮಿಯನ್ನು ರೈತರಿಂದಲೂ ಪಡೆಯಲಾಗುವುದು ಎಂದರು.

ನಿಗಮ ಮಂಡಳಿ ನೇಮಕದಲ್ಲಿ ಜಿಲ್ಲೆಯನ್ನು ಕಡೆಗಣಿಸಿಲ್ಲ. ಪಕ್ಷಕ್ಕಾಗಿ ದುಡಿದವರಿಗೆ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಪತ್ರಕರ್ತರ ಪ್ರಶ್ನೆಗೆ ಶಾಸಕ ಎಚ್.ಆರ್.ಗವಿಯಪ್ಪ ಉತ್ತರಿಸಿದರು.

ಜಿಲ್ಲೆಯಲ್ಲಿ 0 ರಿಂದ 5 ವರ್ಷದ ಒಳಗಿನ 133429 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 1034 ಬೂತ್‌ಗಳನ್ನು ಸ್ಥಾಪಿಸಲಾಗಿದೆ. 8 ಸಂಚಾರಿ ತಂಡ, 50 ಟ್ರಾನ್ಸಿಟ್ ತಂಡ, 2184 ಲಸಿಕಾ ಕಾರ್ಯಕರ್ತರು, 180 ಮೇಲ್ವಿಚಾರಕರನ್ನು ಪಲ್ಸ್ ಪೋಲಿಯೋ ಅಭಿಯಾನಕ್ಕೆ ನೇಮಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಂಕರ್‌ನಾಯ್ಕ್ ಮಾಹಿತಿ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿ ಡಾ.ನಾಗರಾಜ್, ಜಿಲ್ಲಾ ಲಸಿಕಾಧಾರಿ ಡಾ.ಜಿ.ಜಂಬಣ್ಣ, ಜಿಲ್ಲಾ   ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

Leave a Reply

Your email address will not be published. Required fields are marked *

error: Content is protected !!