WhatsApp Image 2024-04-16 at 5.28.00 PM

 ಸಿರುಗುಪ್ಪ ಸಾರ್ವಜನಿಕ ಕುಂದು ಕೊರತೆ ಮತ್ತು ಅಹವಾಲು ಸ್ವೀಕಾರ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 16- ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾ ಅಧಿಕಾರಿ ಕಚೇರಿಯ ಸಭಾಭವನದಲ್ಲಿ ಕರ್ನಾಟಕ ಸರ್ಕಾರ ಕರ್ನಾಟಕ ಲೋಕಾಯುಕ್ತ ಬಳ್ಳಾರಿ ಕಂದಾಯ ತಾಲೂಕು ಆಡಳಿತ ಸಿರುಗುಪ್ಪ ಸಹಯೋಗದಲ್ಲಿ ಸಾರ್ವಜನಿಕ ಕುಂದು ಕೊರತೆ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ ದಲ್ಲಿ ಬಳ್ಳಾರಿ ಲೋಕಾಯುಕ್ತ ಎಸ್ ಪಿ ಸಿದ್ದರಾಜು ಸಿಪಿಐ ಸಂಗಮೇಶ್ ತಹಸಿಲ್ದಾರ್ ಶಂಸೇ ಆಲಂ ಅವರ ನೇತೃತ್ವದಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ಸಮಸ್ಯೆಗಳ ಅಹವಾಲು ಸ್ವೀಕರಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಿ ರಾಜೇಶ್ವರಿ ತಾಲೂಕ ಆರೋಗ್ಯ ವೈದ್ಯಾಧಿಕಾರಿ ಡಾ ಬಿ ಈರಣ್ಣ ನಗರಸಭೆಯ ಕಂದಾಯ ಅಧಿಕಾರಿ ವೆಂಕೋಬ ತಾಲೂಕ ಕಚೇರಿಯ ಕಂದಾಯ ಅಧಿಕಾರಿ ಶಕ್ಷಾವಲಿ ಗ್ರಾಮೀಣ ನೀರು ಪೂರೈಕೆ ನೈರ್ಮಲ್ಯ ಅಧಿಕಾರಿ ಎ ಇ ಇ ರವೀಂದ್ರ ನಾಯಕ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ರಾಘವೇಂದ್ರ ವರ್ಮ ಸಿಡಿಪಿಓ ಪ್ರದೀಪ್ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ ಗಾದಿಲಿಂಗಪ್ಪ ಅಬಕಾರಿ ಇಲಾಖೆಯ ಸಿಪಿಐ ಜೆಸ್ಕಾಂ ಎ ಇ ಇ ನವೀನ್ ಕುಮಾರ್ ಶಿಕ್ಷಣ ಇಲಾಖೆಯ ಅಧಿಕಾರಿಗಳು ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಭಾಷಾ ಕಾರ್ಮಿಕ ಇಲಾಖೆಯ ಅಧಿಕಾರಿ ಸಮಾಜಿಕ ಕಾರ್ಯಕರ್ತ ಎ ಅಬ್ದುಲ್ ನಬಿ ಸೇರಿ ಅಧಿಕಾರಿಗಳು ಸಾರ್ವಜನಿಕರು ಇದ್ದರು.

ಅಹವಾಲು ಸ್ವೀಕರಿಸಿದ ಲೋಕಾಯುಕ್ತರು ಸಮಸ್ಯೆಗಳನ್ನು ಚರ್ಚಿಸಿ ಶೀಘ್ರವೇ ಪರಿಹರಿಸಲಾಗುತ್ತದೆ ಎಂದು ಸಭೆಯಲ್ಲಿ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!