
ಸ್ಯಾಮ್ ಪಿತ್ರೋಡ ಹೇಳಿಕೆ ಖಂಡಿಸಿ ಯುವಮೋರ್ಚಾ ಪ್ರತಿಭಟನೆ
ಕರುನಾಡ ಬೆಳಗು ಸುದ್ದಿ
ಬೆಂಗಳೂರು, 09- ಕಾಂಗ್ರೆಸ್ ಪಕ್ಷದ ಅಂತರಾಷ್ಟ್ರೀಯ ಅಧ್ಯಕ್ಷ ಸ್ಯಾಮ್ ಪಿತ್ರೋಡರವರು ಭಾರತೀಯರ ಕುರಿತು ಅವಹೇಳನಕಾರಿ ಹೇಳಿಕೆ ಕೊಟ್ಟದ್ದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ಸಂಜೆ ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಪ್ರತಿಭಟನೆ ಮಾಡಿತು.
ಕಾಂಗ್ರೆಸ್ ಪಕ್ಷದ ವಿಭಜನಕಾರಿ ನೀತಿ, ದ್ವೇಷ ಕೆರಳಿಸುವ ಗುಣದ ಕುರಿತು ಆಕ್ಷೇಪ ವ್ಯಕ್ತಪಡಿಸಿದರು.
ಸ್ಯಾಮ್ ಪಿತ್ರೋಡ ಅವರ ಮೂಲಕ ಕಾಂಗ್ರೆಸ್ ಪಕ್ಷವು ದೇಶವನ್ನು ಒಡೆಯುವ, ಛಿದ್ರ ಛಿದ್ರ ಮಾಡುವ, ದೇಶದ ಜನರಲ್ಲಿ ಬಿರುಕು ತರುವ ಕೆಲಸವನ್ನು ಮಾಡಿದೆ ಎಂದು ಮುಖಂಡರು ಟೀಕಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಸಂದೀಪ್ ರವಿ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಮತ್ತು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.