2d3b36a7-f962-4655-9978-eb74dcdae366

ಹಂಪಿ ಉತ್ಸವ ಜನಮನಸೂರೆಗೊಂಡ ತುಂಗಾರತಿ

ಕರುನಾಡ ಬೆಳಗು ಸುದ್ದಿ

ಹೊಸಪೇಟೆ (ವಿಜಯನಗರ) ಫೆ. 01 –  ಹಂಪಿ ಉತ್ಸವ ನಿಮಿತ್ತ ವಿರೂಪಾಕ್ಷೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಪವಿತ್ರ ತುಂಗಾಭದ್ರಾ ನದಿಯ ತಟದಲ್ಲಿ ಬುಧವಾರ ರಾತ್ರಿ ನಡೆದ ತುಂಗಾರತಿ ಜನಮನಸೂರೆಗೊಂಡಿತು.

ನದಿದಡದಲ್ಲಿಯೇ ಸುಂದರ ಮಂಟಪ ನಿರ್ಮಿಸಿ ತಾಯಿ ಭುವನೇಶ್ವರಿ ದೇವಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ವಿವಿಧ ರೀತಿಯ ಧಾರ್ಮಿಕ ಆಚರಣೆಗಳ ಮೂಲಕ ತುಂಗಾಭದ್ರಾ ನದಿ ಮತ್ತು ಭುವನೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನದಿಗೆ ಬಾಗಿನ ಅರ್ಪಿಸಲಾಯಿತು.
ಈ ವಿಶೇಷ ಕಾರ್ಯಕ್ರಮದಲ್ಲಿ ವಿಜಯನಗರ ಶಾಸಕರಾದ ಹೆಚ್.ಆರ್.ಗವಿಯಪ್ಪ, ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್. ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ಇದೆ ವೇಳೆ ವಿದ್ಯಾರ್ಥಿಗಳು ಸಾಂಸ್ಕೃತಿ ಕಾರ್ಯಕ್ರಮ ಹಾಗೂ ವಿದ್ಯಾರ್ಥಿನಿಯರು ಭರತನಾಟ್ಯ ನೃತ್ಯ ಪ್ರದರ್ಶಿಸಿದರು.

Leave a Reply

Your email address will not be published. Required fields are marked *

error: Content is protected !!