
ಹಾಸಗಲ್ ಗ್ರಾಮ ಪಂಚಾಯತಿಯ ನರೇಗಾ ಕೂಲಿಕಾರರಿಗೆ ಮತದಾನ ಜಾಗೃತಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 29- ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತದಾನ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲು ಕೊಪ್ಪಳ ತಾಲೂಕಿನ ಹಾಸಗಲ್ ಗ್ರಾಮ ಪಂಚಾಯತಿಯಿಂದ ನರೇಗಾ ಕಾಯಕ ಬಂಧುಗಳು ಹಾಗು ಕೂಲಿಕಾರರಿಗೆ ಸ್ವೀಪ್ ಕಾರ್ಯಕ್ರಮ ಜರುಗಿತು.
ಹಾಸಗಲ್ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಸೌಮ್ಯ ಕೆ ಮಾತನಾಡಿ ಮೇ-7 ರಂದು ಜರುಗುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವದರ ಮೂಲಕ ಸುಭದ್ರ ದೇಶವನ್ನಾಗಿ ನಿರ್ಮಿಸೋಣ. ಮತದಾನ ದಿನದಂದು ಚುನಾವಣೆ ಆಯೋಗ ನಿಗದಿಪಡಿಸಿದ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿ ನಮಗೆ ಸೂಕ್ತ ಎನಿಸುವ ವ್ಯಕ್ತಿಗೆ ಮತ ಚಲಾಯಿಸಬೇಕೆಂದರು. ಶಿವಪುರ ಗ್ರಾಮ ಪಂಚಾಯತಿಯ ಎಲ್ಲಾ ನರೇಗಾ ಕೂಲಿಕಾರರು ಮತದಾನ ಮಾಡಿ ಇತರರಿಗೆ ಮಾದರಿಯಾಗಬೇಕೆಂದು ಕರೆ ನೀಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪವಿತ್ರವಾದ ಕಾರ್ಯ. ಮತದಾನ ಮಾಡುವ ಮೂಲಕ ದೇಶಕ್ಕೆ ದೊಡ್ಡ ಕೊಡುಗೆ ನೀಡಿದಂತಾಗುತ್ತದೆ ಎಂದರು. ಸ್ವೀಪ್ ಕಾರ್ಯಕ್ರಮದಲ್ಲಿ ಸೇರಿರುವ ಎಲ್ಲಾ ನರೇಗಾ ಕೂಲಿಕಾರರು ನಿಮ್ಮ ಕುಟುಂಬದ 18 ವರ್ಷ ಮೇಲ್ಪಟ್ಟ ಸದಸ್ಯರು ಮತ ಚಲಾಯಿಸುವ ಮೂಲಕ ದೇಶಕ್ಕೆ ಸುಭದ್ರ ಆಡಳಿತ ಒದಗಿಸಲು ಕೈ ಜೋಡಿಸೊಣ ಎಂದರು.
ನಂತರ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು
ಸದರಿ ಸ್ವೀಪ್ ಕಾರ್ಯಕ್ರಮದಲ್ಲಿ ಕರವಸೂಲಿಗಾರ ಶ್ರೀಕಾಂತ ಮಾಲಿಪಾಟೀಲ್, ಡಿಇಒ ದ್ಯಾಮಣ್ಣ, ಕಾಯಕ ಬಂಧುಗಳು, 120 ಕ್ಕೂ ನರೇಗಾ ಕೂಲಿಕಾರರು ಹಾಜರಿದ್ದರು.