
ಹಿರಿಯ ಸಂಶೋಧನಾ ವಿದ್ಯಾರ್ಥಿ ಓ.ಮಂಜುನಾಥ ಅಫಘಾತದಲ್ಲಿ ಮರಣ ನಿಧನಕ್ಕೆ ಸಂತಾಪ
ಕರುನಾಡ ಬೆಳಗು ಸುದ್ದಿ
ಹೊಸಪೇಟೆ,25- ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದ ಹಿರಿಯ ಸಂಶೋಧನಾ ವಿದ್ಯಾರ್ಥಿಯಾಗಿದ್ದ ಶ್ರೀ. ಓ. ಮಂಜುನಾಥ ಅವರು ದಿ. 24 ರಂದು ರಸ್ತೆ ಅಪಘಾತದಲ್ಲಿ ನಿಧನರಾದ ಕಾರಣಕ್ಕಾಗಿ ಸಂತಾಪ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಮೃತರ ಸಂಶೋಧನಾ ಬದ್ಧತೆ ಮತ್ತು ಶೈಕ್ಷಣಿಕ ಹಾಗೂ ಕೌಟುಂಬಿಕ ಹಿನ್ನೆಲೆಯ ದೂರದೃಷ್ಟಿಯ ಕುರಿತು ಪ್ರಾಧ್ಯಾಪಕರಾದ ಪ್ರೊ. ಎನ್. ಚಿನ್ನಸ್ವಾಮಿ ಸೋಸಲೆ ಮತ್ತು ಪ್ರೊ. ವಿರೂಪಾಕ್ಷಿ ಪೂಜಾರಹಳ್ಳಿ ಅವರು ಸಂತಾಪ ನುಡಿಗಳನ್ನಾಡಿದರು. ಕನ್ನಡ ವಿಶ್ವವಿದ್ಯಾಲಯದ ಭುವನ ವಿಜಯ ಸಭಾಂಗಣದಲ್ಲಿ ಎಲ್ಲರು ಸೇರಿ ಮೌನವನ್ನು ಆಚರಿಸಿ, ಮೃತರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಿದರು.