ಹೈಟೆಕ್ ಹಾರ್ವೆಸ್ಟರ್ ಹಬ್ಗಳ ಸ್ಥಾಪನೆಗೆ ಅರ್ಜಿ ಆಹ್ವಾನ
ಕರುನಡ ಬೆಳಗು ಸುದ್ದಿ
ಹೊಸಪೇಟೆ(ವಿಜಯನಗರ)ಜ.10 : ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಹೈಟೆಕ್ ಹಾರ್ವೆಸ್ಟರ್ ಹಬ್ಗಳ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿಯಲ್ಲಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ ಸ್ಥಾಪಿಸಲಾಗಿರುವ ಕೃಷಿಯಲ್ಲಿ ಯಂತ್ರಧಾರೆ ಕೇಂದ್ರಗಳನ್ನು ಜಿಲ್ಲೆಯಲ್ಲಿ ಇನ್ನಷ್ಟು ಬಲ ಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಬ್ ಹಾಗೂ ಶುಗರ್ಕೇನ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಆಸಕ್ತರಿಂದ ಅರ್ಜಿ ಸಲ್ಲಿಸಬಹುದಾಗಿದೆ.
ಯಂತ್ರಗಳನ್ನು ಬಾಡಿಗೆಗೆ ನೀಡುವ ಮೂಲಕ ರೈತರು ಹೆಚ್ಚುವರಿ ಆದಾಯ ಪಡೆಯಬಹುದಾಗಿದೆ. ಹೈಟೆಕ್ ಹಾರ್ವೆಸ್ಟರ್ ಹಬ್ಗಳನ್ನು ಬೆಳೆಯ ವಿಧ ಮತ್ತು ಕಟಾವು ಅವಧಿಯ ಆಧಾರದ ಮೇಲೆ ಕಾರಿಡಾರ್ ಮಾದರಿಯಲ್ಲಿ ಸ್ಥಾಪಿಸುವುದು. ಹೈಟೆಕ್ ಹಾರ್ವೆಸ್ಟರ್ ಹಬ್ಗಳನ್ನು ಅನುಷ್ಟಾನ ಮಾಡಲು ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು, ಸೇವಾದಾರ ಸಂಸ್ಥೆಗಳು, ವೈಯಕ್ತಿಕ ಫಲಾನುಭವಿಗಳು ಹಾಗೂ ನೊಂದಾಯಿತ ಸಂಘ ಸಂಸ್ಥೆಗಳು (ಎಫ್.ಪಿ.ಓ ಗಳನ್ನೊಳಗೊಂಡಂತೆ) ಭಾಗವಹಿಸಬಹುದಾಗಿರುತ್ತದೆ.
ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ (ಗರಿಷ್ಟ ರೂ. 40 ಲಕ್ಷ ಸಹಾಯಧನ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಗರಿಷ್ಠ ಶೇ.70 ರಂತೆ ಹಾಗೂ ಸಂಘ-ಸಂಸ್ಥೆಗಳಿಗೆ (ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆ/ ಎಫ್.ಪಿ.ಓ ಗಳನ್ನೊಳಗೊಂಡAತೆ) ಗರಿಷ್ಠ ಶೇ.70 ರಂತೆ (ಗರಿಷ್ಟ ರೂ.50 ಲಕ್ಷ ಸಹಾಯಧನ) ಸಹಾಯಧನ ಪಡೆಯಲು ಅವಕಾಶವಿರುತ್ತದೆ.
ಸಂಘ, ಸಂಸ್ಥೆಗಳು (ಎಫ್.ಪಿ.ಓ ಗಳನ್ನೊಳಗೊಂಡಂತೆ) ಟ್ರಸ್ಟ್ಗಳು ಮಾತ್ರ ಕಂಬೈAಡ್ ಹಾರ್ವೆಸ್ಟರ್ ಮತ್ತು ಶುಗರ್ ಕೇನ್ ಹಾರ್ವೆಸ್ಟರ್ ಗಳನ್ನು ಒಳಗೊಂಡ “ಕೋಂಬೋ ಹಾರ್ವೆಸ್ಟರ್ ಹಬ್” ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ. ಕೃಷಿ ಯಂತ್ರೋಪಕರಣವಾರು ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗುವುದು. ಸಹಾಯಧನವನ್ನು “ಕ್ರೆಡಿಟ್ ಲಿಂಕ್ಡ್ ಬ್ಯಾಕ್ ಎನ್ಡೆಡ್ ಸಬ್ಸಿಡಿ” ಮುಖಾಂತರ ಬಿಡುಗಡೆ ಮಾಡಲಾಗುವುದು. ಆಯ್ಕೆಯಾದ ಫಲಾನುಭವಿಗಳು/ಸಂಘ-sಅಂಸ್ಥೆಗಳು ಕೃಷಿ ಮೂಲಭೂತ ಸೌಕರ್ಯ ನಿಧಿ (ಎಐಎಫ್ – ಅಗ್ರಿಕಲ್ಚರಲ್ ಇನ್ಫ್ರಾಸ್ಟೆಕ್ಚರ್ ಫಂಡ್) ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ.
ಸಹಕಾರ ಸಂಘಗಳ ನಿಬಂಧನೆಯಂತೆ, ಕಂಪನಿ ಕಾಯ್ದೆಯಡಿ ನೋಂದಾಯಿಸಿದ ಸಂಘ-ಸAಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತವೆ. ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆಗಳ, ಕೃಷಿ ಯಂತ್ರೋಪಕರಣಗಳ ಬ್ಯಾಂಕ್, ರೈತ ಉತ್ಪಾದಕ ಸಂಸ್ಥೆಗಳು, ಇತರೆ ಸಂಘ-ಸಂಸ್ಥೆಗಳು ರಾಜ್ಯಾದ್ಯಂತ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದ್ದು, ಆರು ಅಥವಾ ಒಂಬತ್ತು ವರ್ಷಗಳ ಕಾಲ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಮತ್ತು ತಪಾಸಣೆಯಲ್ಲಿ ಸಂಪೂರ್ಣವಾಗಿ ಲೆಕ್ಕ-ಪತ್ರ ಹಾಗೂ ಯಂತ್ರೋಪಕರಣಗಳನ್ನು ಹಾಜರುಪಡಿಸಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿಗಳನ್ನು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಜನವರಿ 20ರೊಳಗಾಗಿ ಸಲ್ಲಿಸಬೇಕು. ಸಹಾಯಕ ಕೃಷಿ ನಿರ್ದೇಶಕರು ಸ್ವೀಕೃತವಾಗುವ ಎಲ್ಲಾ ಅರ್ಜಿಗಳನ್ನು ಎಲ್ಲಾ ಅಂಶಗಳನ್ವಯ ಪರಿಶೀಲಿಸಿ ಸಂಭಂಧಿಸಿದ ಉಪ ಕೃಷಿ ನಿರ್ದೇಶಕರ ಮುಖಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ವಿಜಯನಗರ ಜಂಟಿ ಕೃಷಿ ನಿರ್ದೇಶಕರಾದ ಶರಣಪ್ಪ ಮುದುಗಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
