
ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ : ಅರಿವು ನೆರವು ಕಾರ್ಯಕ್ರಮ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 29- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳ ಕಚೇರಿ ಹಾಗೂ ಶ್ರೀ ಗವಿಸಿದ್ದೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆಗಳ ಘಟಕಗಳು ಕೊಪ್ಪಳ ಇವರ ಸಹಯೋಗದಲ್ಲಿ ಶ್ರೀ ಗವಿಸಿದ್ದೇಶ್ವರ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ “ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆ”ಯ ಅಂಗವಾಗಿ ಅರಿವು ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಜಿಲ್ಲಾ ಕುಷ್ಠರೋಗ ನಿವಾರಣಾ ಅಧಿಕಾರಿಗಳು ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ.ಪ್ರಕಾಶ ಹೆಚ್. ಅವರು ಮಾತನಾಡಿ, ಮಾದಕ ವಸ್ತುಗಳ ಸೇವನೆ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಾದಕ ವಸ್ತುಗಳ ಸೇವನೆಯಿಂದ ದೇಶದ ಅಭಿವೃದ್ಧಿ ಕುಂಠಿತಗೊಳ್ಳುತ್ತಿದೆ. ಯುವಕರಲ್ಲಿ ಮಾದಕ ವಸ್ತುಗಳ ಸೇವನೆ ಹೆಚ್ಚಾಗಿ ಕಂಡುಬರುತ್ತಿದೆ. ಹೀಗಾಗಿ ಯಾರೂ ಈ ದುಶ್ಚಟಕ್ಕೆ ಬಲಿಯಾಗಬಾರದು ಎಂದು ಹೇಳಿದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ರವೀಂದ್ರನಾಥ ಎಮ್.ಹೆಚ್. ಅವರು ಮಾತನಾಡಿ, ದೈಹಿಕವಾಗಿ ಮತ್ತು ಮಾನಸಿಕ ಆರೋಗ್ಯವಂತರಾಗಿ ಬಾಳಿರಿ. ಮಾನಸಿಕವಾಗಿ ಯಾರೂ ಕುಗ್ಗಬಾರದು. ಆರೋಗ್ಯಯುತ ಜೀವನ ಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯರಾದ ಡಾ.ಲಕ್ಷಿö್ಮÃದೇವಿ ಪಾಟೀಲ ಅವರು ಮಾತನಾಡುತ್ತಾ, ಮಾದಕ ವಸ್ತುಗಳ ಸೇವನೆ ಒಂದು ವ್ಯಸನ. ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದರಿಂದ ಹೊರಬರಲು ವ್ಯಸನಮುಕ್ತ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದರು.
ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಾದ ಡಾ.ನಂದಕುಮಾರ ಅವರು ಮಾತನಾಡಿ, ತಂಬಾಕು ಸೇವನೆ ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಮತ್ತು ತಂಬಾಕು ಮುಕ್ತ ಸಮಾಜ ನಮ್ಮೆಲ್ಲರ ಹೊಣೆಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಗವಿಸಿದ್ದೇಶ್ವರ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಚನ್ನಬಸವ ಅವರು ಮಾತನಾಡಿ, ಆರೋಗ್ಯದಲ್ಲಿ ವ್ಯಾಯಾಮ ಹಾಗೂ ದೈಹಿಕ ಚಟುವಟಿಕೆಯು ತುಂಬಾ ಮುಖ್ಯವಾಗುತ್ತದೆ. ನಮ್ಮ ಜೀವನ ಶೈಲಿಯು ಕ್ರಮಬದ್ಧವಾಗಿ ಇದ್ದರೆ ಇಂತಹ ವ್ಯಸನಗಳಿಗೆ ದಾಸರಾಗುವುದನ್ನು ತಪ್ಪಿಸಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳಾದ ಡಾ.ಶಶಿಧರ ಆಲೂರು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ವಿ ಪೂಜಾರ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನಃಶಾಸ್ತçಜ್ಞರಾದ ಪುಷ್ಪಾ ಥೆರೇಸಾ, ರಾಷ್ಟಿçÃಯ ಸೇವಾಯೋಜನೆಗಳ ಘಟಕದ ಕಾರ್ಯಕ್ರಮ ಅಧಿಕಾರಿಗಳಾದ ಡಾ.ರಾಜು ಹೊಸಮನಿ ಹಾಗೂ ಡಾ.ನಾಗರಾಜ ದಂಡೋತಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.