WhatsApp Image 2024-01-29 at 1.47.00 PM

ಅಕ್ಷರ ದಾಸೋಹ ಕಾರ್ಯಕ್ರಮ
ಸರಕಾರದ ಒಂದು ಮಹತ್ವಕಾಂಕ್ಷಿ ಯೋಜನೆ ಎಫ್. ಎಂ. ಕಳ್ಳಿ

ಕರುನಾಡ ಬೆಳಗು ಸುದ್ದಿ

ಯಲಬುರ್ಗಾ,30- ರಾಜ್ಯದಲ್ಲಿ ಬಹಳಷ್ಟು ಮಕ್ಕಳು ಹಸಿವಿನಿಂದ ಇರಬಾರದು ಎಂದು ಸರಕಾರಿ ಶಾಲೆಗಳಲ್ಲಿ ಬಿಸಿಯೂಟ ಅನ್ನದಾನ ಶ್ರೇಷ್ಠವಾದದ್ದು ಬಿಸಿಯೂಟ ಅಕ್ಷರ ದಾಸೋಹ ಸರಕಾರದ ಅಂತ್ಯತ ಮಹತ್ವಕಾಂಕ್ಷಿ ಯೋಜನೆಯಾಗಿದೆ ಎಂದು ತಾಲೂಕು ಅಕ್ಷರ ದಾಸೋಹ ಅಧಿಕಾರಿ ಎಫ್. ಎಂ. ಕಳ್ಳಿ ಹೇಳಿದರು.

ತಾಲೂಕಿನ ಹಿರೇವಂಕಲಕುಂಟಾ ಹೋಬಳಿ ಮಟ್ಟದ ಅಕ್ಷರ ದಾಸೋಹ ಕಾರ್ಯಕ್ರಮದ ಅಡುಗೆದಾರರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹಿರೇವಂಕಲಕುಂಟಾ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದ ಅವರು ಅಕ್ಷರ ದಾಸೋಹ ಕಾರ್ಯಕ್ರಮ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ ಎಲ್ಲಾ ಅಡುಗೆದಾರರು ಸ್ವಚ್ಛತೆ ಮತ್ತು ಸುರಕ್ಷತೆಯಿಂದ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಬೇಕು ಎಂದರು.

ಅಕ್ಷರ ದಾಸೋಹ ಕಾರ್ಯಕ್ರಮದಡಿಯಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಕ್ಷೀರಭಾಗ್ಯ ಯೋಜನೆಯಡಿ ವಾರದಲ್ಲಿ ಐದು ದಿನ ಬಿಸಿ ಹಾಲು ಮತ್ತು ವಾರದ ಎಲ್ಲಾ ಶಾಲಾ ದಿನಗಳಂದು ಬಿಸಿಯೂಟ ವಿತರಿಸಲಾಗುತ್ತದೆ. ಇದರೊಂದಿಗೆ 2023-24ನೇ ಸಾಲಿನಲ್ಲಿ ಸರ್ಕಾರ ನಿಗದಿಪಡಿಸಿದ 80 ದಿನಗಳಿಗೆ ಪೂರಕ ಪೌಷ್ಠಿಕ ಆಹಾರ ಮೊಟ್ಟೆ, ಮೊಟ್ಟೆ ತಿನ್ನದೇ ಇರುವ ಮಕ್ಕಳಿಗೆ ಬಾಳೆಹಣ್ಣು ಶೇಂಗಾ ಚಿಕ್ಕಿ ವಿತರಣೆ ಮಾಡಲಾಗುತ್ತದೆ. ಶಾಲಾ ಹಂತದಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ವಚ್ಛತೆ ಹಾಗೂ ಸುರಕ್ಷತೆಯಿಂದ ಕೆಲಸ ನಿರ್ವಹಿಸಬೇಕು. ಮಕ್ಕಳಿಗೆ ಸಾಲಾಗಿ ಕುಳ್ಳಿರಿಸಿ ಪಂಕ್ತಿ ಭೋಜನ ವ್ಯವಸ್ಥೆ ಮಾಡಬೇಕು ಎಂದರು.

ಪ್ರತಿ ದಿನ ಅಡುಗೆ ಸಿದ್ಧಪಡಿಸಿದ ನಂತರ ಇಬ್ಬರು ಶಿಕ್ಷಕರು ಕಡ್ಡಾಯವಾಗಿ ರುಚಿ ನೋಡಿ ದೃಢೀಕರಣ ಮಾಡಬೇಕು ಮತ್ತು ಒಬ್ಬರು SDMCಯವರು ರುಚಿ ನೋಡಿ ದೃಢೀಕರಣ ಮಾಡಬೇಕು ಎಂದರು. ನಂತರ ಬಾಬುಸಾಬ ಲೈನದಾರ್ ಮುಖ್ಯೋಪಾಧ್ಯಾಯರು ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ . ಮಾತನಾಡಿ ಅವರು ಶಾಲೆಯಲ್ಲಿ ಮಕ್ಕಳಿಗೆ ಅಡುಗೆ ತಯಾರಿಸುವ ಕೆಲಸ ಅತ್ಯಂತ ಪವಿತ್ರವಾದ ಕೆಲಸವಾಗಿದೆ. ಶಾಲೆಯ ಮಕ್ಕಳು ತಮ್ಮ ಮನೆಯ ಮಕ್ಕಳು ಎಂದು ಭಾವಿಸಿ ಕೆಲಸ ನಿರ್ವಹಿಸಬೇಕು ಎಂದರು.

ಶರಣಪ್ಪ ರಾವಣಕಿ ಶಿಕ್ಷಣ ಸಂಯೋಜಕರು ಪ್ರಾಸ್ತಾವಿಕವಾಗಿ ಮಾತನಾಡಿ ಅಕ್ಷರ ದಾಸೋಹ ಕಾರ್ಯಕ್ರಮದ ಅನುಷ್ಠಾನದಲ್ಲಿ ಶಾಲಾ ಹಂತದಲ್ಲಿ ಸಹಶಿಕ್ಷಕರು, ಮುಖ್ಯೋಪಾಧ್ಯಾಯರು, ಎಸ್.ಡಿ.ಎಮ್.ಸಿ ಹಾಗೂ ಅಡುಗೆದಾರರು ಸಮನ್ವಯದಿಂದ ಕೆಲಸ ನಿರ್ವಹಿಸಿದಾಗ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾದ್ಯ ಎಂದರು.
ಯಲಬುರ್ಗಾ ಅಗ್ನಿ ಶಾಮಕ ಠಾಣಾಧಿಕಾರಿಗಳಾದ ಜಗದೀಶ್ ಹಾಗೂ ಮಧು ರವರು ಅಗ್ನಿನಂದಕವನ್ನು ಬಳಸುವ ವಿಧಾನವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿದರು.

ಅಪೂರ್ವ ಭಾರತ ಗ್ಯಾಸ್ ನ ಶಿವಕುಮಾರ ಪಟ್ಟಣಶೆಟ್ಟಿ ಗ್ಯಾಸ್ ಸ್ಟವ್ ಬಳಸುವ ವಿಧಾನವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿದರು.
ಆರೋಗ್ಯ ಇಲಾಖೆಯ ಡಾಕ್ಟರ್ ರೆಡ್ಡಿ ನಾಯಕ ಅಡುಗೆದಾರರ ವೈಯಕ್ತಿಕ ಸ್ವಚ್ಛತೆ, ಅಡುಗೆ ಕೋಣೆ ಮತ್ತು ದಾಸ್ತಾನು ಕೊಠಡಿಯ ಸ್ವಚ್ಛತೆ ಕುರಿತು ಮಾಹಿತಿ ನೀಡಿದರು. ಶರಣಪ್ಪ ಕರುನಾಳ ಸಿ.ಆರ್.ಪಿ ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಅಡುಗೆದಾರರಿಗೆ ಅಡುಗೆ ತಯಾರಿಕೆ ಸ್ಪರ್ಧೆ ಏರ್ಪಡಿಸಲಾಗಿತ್ತು. ಅಡುಗೆದಾರರಾದ ಖೈರುನ್ನಬೀ ಸರ್ಕಾರಿ ಪ್ರೌಢ ಶಾಲೆ ಮಾಟಲದಿನ್ನಿ ಪ್ರಥಮ ಸ್ಥಾನ ಪಡೆದರು. ಹುಸೇನಬಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ತಾಳಕೇರಿ ದ್ವಿತೀಯ ಸ್ಥಾನ ಪಡೆದರು. ಮಹಿಮೂದಾ ಬೇಗಂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕರಮುಡಿ ತೃತೀಯ ಸ್ಥಾನ ಪಡೆದರು. ವಿಜೇತರಿಗೆ ಬಹುಮಾನಗಳನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಅಜು೯ನ ಗಿರಣಿ ಮಾಟಲದಿನ್ನಿ ಇವರು ನೀಡಿದರು. ಶಿವನಗೌಡ ಪಾಟೀಲ ನಿರೂಪಿಸಿದರು. ಈ.ಕಾರ್ಯಕ್ರಮದಲ್ಲಿ ದೊಡ್ಡನಗೌಡ ಸಿ.ಆರ್.ಪಿ ಜಯಶ್ರೀ ತೋಟದ ರೇಣುಕಾ ಲಿಂಗಣ್ಣನವರ ಬಸವರಾಜ ಕರಕನಗೌಡ್ರ ಮತ್ತು ಇತರರು ಭಾಗವಹಿಸಿದ್ದರು

Leave a Reply

Your email address will not be published. Required fields are marked *

error: Content is protected !!