ಅಡವಿಭಾವಿಯಲ್ಲಿ ವಿಶ್ವ ಪರಿಸರ ದಿನಾಚರಣೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 5- ಕುಷ್ಟಗಿ ತಾಲ್ಲೂಕಿನ ಚಳಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಅಡವಿಭಾವಿ ಗ್ರಾಮದಲ್ಲಿ ಜೂ.05 ರಂದು ವಿಶ್ವ ಪರಿಸರ ದಿನಾಚರಣೆ ಹಾಗೂ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ, ತಂಬಾಕು ಸೇವನೆಯಿಂದ ಆಗುವ ತೊಂದರೆಗಳು, ಆರೋಗ್ಯಕರ ಜೀವನ ಶೈಲಿ, ಸೊಳ್ಳೆಗಳ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಆರೋಗ್ಯ ಶಿಕ್ಷಣ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶರಣಪ್ಪ ರಾಜೂರ, ಆರೋಗ್ಯ ಇಲಾಖೆಯ ಸಾವಿತ್ರಿ ಸೇರಿದಂತೆ ಗ್ರಾಮಸ್ಥರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಭಾಗವಹಿಸಿದ್ದರು.
